ಶುಕ್ರವಾರ, ಸೆಪ್ಟೆಂಬರ್ 17, 2021
26 °C
ಅಂಬೇಡ್ಕರ್ ಯುವ ಸೇನೆಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಅಂಬೇಡ್ಕರ್ ಯುವ ಸೇನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಆಹಾರ ಪದಾರ್ಥ, ಅಡುಗೆ ಅನಿಲ, ತೈಲ ಬೆಲೆ ಇಳಿಸಬೇಕು. ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಮೊತ್ತದಷ್ಟೇ ಶಿಷ್ಯವೇತನ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೂ ಕೊಡಬೇಕು. ಶಿಷ್ಯವೇತನ ಆಯಾ ಶೈಕ್ಷಣಿಕ ವರ್ಷದಲ್ಲೇ ಬಿಡುಗಡೆ ಮಾಡಬೇಕು.ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕೊಡಲಾಗುವ ಪ್ರೋತ್ಸಾಹ ಧನದ ಮೊತ್ತ ಹೆಚ್ಚಿಸಬೇಕು. ಖಾಸಗಿ ಶಾಲಾ ಕಾಲೇಜುಗಳಲ್ಲಿ ಡೋನೆಷನ್ ಹಾವಳಿ ನಿಯಂತ್ರಿಸಬೇಕು. 

ಪರಿಶಿಷ್ಟ ವಿದ್ಯಾರ್ಥಿನಿಯರ ಅಪಹರಣ, ಬಲತ್ಕಾರ, ಹತ್ಯೆಯಂಥ ಅಮಾನವೀಯ ಘಟನೆಗಳನ್ನು ತಡೆಯಬೇಕು. ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಡಾ. ಅಂಬೇಡ್ಕರ್ ನಿಗಮದಿಂದ ಜಾರಿಗೊಳಿಸುತ್ತಿರುವ ವಿವಿಧ ಯೋಜನೆಗಳ ಗುರಿ ಹೆಚ್ಚಿಸಬೇಕು ಎನ್ನುವುದು ಸೇರಿ 11 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಚಂದ್ರಕಾಂತ ನಿರಾಟೆ, ಉಪಾಧ್ಯಕ್ಷ ಸುರೇಶ ಘಾಂಗ್ರೆ, ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಗುನ್ನಳ್ಳಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ವಿ. ಒಳಖಂಡಿ, ಜಗನ್ನಾಥ ನವಲೆ, ದಶರಥ ದೊಡ್ಡಮನಿ, ಗುಂಡಪ್ಪ ಜ್ಯೋತಿ, ಪ್ರಹ್ಲಾದ್ ಮಾಲೆಕರ್, ಸಮದ್‍ಖಾನ್ ಗಾದಗಿ, ಶರಣಪ್ಪ ಮೇತ್ರೆ, ಜಾಫರ್ ಕಂಗಟಿ, ಅನುರಾಜ್ ಕುಂದೆ, ಶರದ್ ಖಾಡಿಲಕರ್, ಶರಣಪ್ಪ ವಲ್ಲೇಪುರೆ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.