ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ನಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ 25 ಎಕರೆ ಜಮೀನು ಮಂಜೂರು ಮಾಡಿರುವುದು ಸ್ವಾಗತಾರ್ಹ ವಿಷಯ. ಆದರೆ, ವಚನ ವಿವಿ ಸರ್ಕಾರಿ ವಿವಿಯಾಗಬೇಕೇ ಹೊರತು ಖಾಸಗಿ ಸಂಸ್ಥೆ ಅಥವಾ ಮಠ ನಡೆಸುವ ವಿವಿ ಆಗಬಾರದು ಎಂದು ಪುಣೆಯ ‘ಬಸವ ಅಂಡರ್ಸ್ಟ್ಯಾಂಡಿಂಗ್ ಅಂಡ್ ರಿಸರ್ಚ್ ಸೆಂಟರ್’ ತಿಳಿಸಿದೆ.

ಈ ಸಂಬಂಧ ಸಂಘಟನೆಯ ಅಧ್ಯಕ್ಷ ಡಾ. ಶಶಿಕಾಂತ ಆರ್. ಪಟ್ಟಣ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಯಾವುದೇ ಕಾರಣಕ್ಕೂ ವಚನ ವಿಶ್ವವಿದ್ಯಾಲಯ ಖಾಸಗಿ ಸ್ವಾಮ್ಯತೆಗೆ ಕೊಡಬಾರದು. ಬೇಕಾದರೆ ವಿಜಯಪುರ ಹಾಗೂ ಕೂಡಲಸಂಗಮದಲ್ಲಿ ಜಾಗವಿದ್ದು, ಅಲ್ಲಿ ಸರ್ಕಾರಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂದು ಆಗ್ರಹಿಸಿದ್ದಾರೆ.

ಹಿಂದಿನ ಬಜೆಟ್ನಲ್ಲಿ ಬೆಂಗಳೂರಿನಲ್ಲಿ ವಚನ ಅಧ್ಯಯನ ಸಂಸ್ಥೆ ಸ್ಥಾಪಿಸುವ ಘೋಷಣೆ ಮಾಡಲಾಗಿತ್ತು. ಆದರೆ, ಇದುವರೆಗೆ ಅದು ಅನುಷ್ಠಾನಕ್ಕೆ ಬಂದಿಲ್ಲ. ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ವರದಿ ಆಧರಿತ ಸರ್ಕಾರದ ನಿರ್ಣಯದ ಪ್ರಸ್ತಾವ ಲಿಂಗಾಯತ ಧರ್ಮದ ಮಾನ್ಯತೆ ಮತ್ತು ಅಲ್ಪಸಂಖ್ಯಾತ ಸ್ಥಾನಮಾನದ ಬೇಡಿಕೆಗೆ ಪೂರಕ ಪರಿಹಾರ ಇನ್ನೂ ದೊರೆತಿಲ್ಲ. ಕೇಂದ್ರ ಸರ್ಕಾರದ ಅಲ್ಪಸಂಖ್ಯಾತ ಕಚೇರಿಗೆ ಕರ್ನಾಟಕ ಸರ್ಕಾರದ ನಿರ್ಣಯದ ಪ್ರಸ್ತಾವ ಅರ್ಜಿ ಮರು ಸಲ್ಲಿಕೆಗೆ ಅವಕಾಶವಿದೆ. ಇದಕ್ಕೆ ಮೀನಮೇಷ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ವಿಜಯಪುರ ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ, ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಬಸವ ಅಧ್ಯನ ಪೀಠ ಸ್ಥಾಪಿಸಬೇಕು. ಅಕ್ಕಮಹಾದೇವಿ ಮಹಿಳಾ ವಿವಿ ಆವರಣದಲ್ಲಿರುವ ಅಕ್ಕನ ಬೆತ್ತಲೆ ಪುತ್ಥಳಿ ಕೂಡಲೇ ತೆರವುಗೊಳಿಸಲು ವಿಜಯಪುರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.