ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ

7

ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ

Published:
Updated:

ಬೀದರ್‌: ಕೋಲಾರ ಜಿಲ್ಲೆಯ ಮಾಲೂರ ತಾಲ್ಲೂಕಿನಲ್ಲಿ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ ಆರೋಪಿಗಳನ್ನು ನೇಣಿಗೆ ಹಾಕಬೇಕು ಎಂದು ಒತ್ತಾಯಿಸಿ ಜಿಲ್ಲೆಯ ವಿವಿಧ ಸಾಮಾಜಿಕ ಸಂಘಟನೆಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದವು.

ಜಿಲ್ಲಾ ಕುಂಬಾರ ಸಂಘ, ವಿಶ್ವಕರ್ಮ ಸಂಘ, ಸವಿತಾ ಸಮಾಜ, ಮಡಿವಾಳ ಸಮಾಜ, ಪದ್ಮಸಾಲಿ ಸಮಾಜದ ಸಂಘಟನೆಗಳು ಹಾಗೂ ಬಾಲಕಿಯರು ಗಣೇಶ ಮೈದಾನದಿಂದ ಮೆರವಣಿಗೆ ಹೊರಟು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತ ಕೆನರಾ ಬ್ಯಾಂಕ್‌, ರೋಟರಿ ವೃತ್ತ, ಜನರಲ್‌ ಕಾರ್ಯಪ್ಪ ವೃತ್ತ, ಅಂಬೇಡ್ಕರ್ ವೃತ್ತ, ಭಗತ್‌ಸಿಂಗ್ ವೃತ್ತ, ಶಿವಾಜಿ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದರು.

ಜಿಲ್ಲಾ ಕುಂಬಾರ ಸಮಾಜದ ಅಧ್ಯಕ್ಷ ಕಾಶೀನಾಥ ಕುಂಬಾರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿದರು.

ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಬಾಲಕಿಯನ್ನು ಅಪಹರಿಸಿ ಅವಳ ಮೇಲೆ ಅತ್ಯಾಚಾರ ಎಸಗಲಾಗಿದೆ. ಪ್ರಕರಣ ಮುಚ್ಚಿ ಹಾಕಲು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜು ಕುಂಬಾರ ಹಲಬರ್ಗಾ, ಸುರೇಶ ಕುಂಬಾರ, ಕಾಮಶೆಟ್ಟಿ ಕುಂಬಾರ, ಗೋರಖನಾಥ ಕುಂಬಾರ ಸಿಕೇನಪುರ, ವಿಠ್ಠಲ ಕುಂಬಾರ, ಅಂಬಾದಾಸ ಕುಂಬಾರ, ಬಾಬುರಾವ್ ಕುಂಬಾರ, ಶಿವರಾಜ್ ಕುಂಬಾರ, ದಶರಥ ಕುಂಬಾರ, ಜಗನ್ನಾಥ ಕುಂಬಾರ, ಪ್ರಹ್ಲಾದ್ ಕುಂಬಾರ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !