ಶನಿವಾರ, ಅಕ್ಟೋಬರ್ 16, 2021
29 °C

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಬಿಜೆಪಿ ಸರ್ಕಾರದ ಕೃಷಿ ಕಾಯ್ದೆಗಳು, ಕಾರ್ಮಿಕ ಸಂಹಿತೆಗಳು, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ ದೇಶಕ್ಕೆ ಮಾರಕವಾಗಿವೆ. ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣಗೊಳಿಸುವ ಮೂಲಕ ಜನರ ಮೇಲೆ ದೊಡ್ಡ ಹೊರೆ ಹೇರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದು ವರ್ಷದ ಅವಧಿಯಲ್ಲಿ 19 ಬಾರಿ ತೈಲ ಉತ್ಪನ್ನಗಳ ಬೆಲೆ ಹೆಚ್ಚಿಸಲಾಗಿದೆ. ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ ಬಸ ಪ್ರಯಾಣ ದರವೂ ಹೆಚ್ಚಳವಾಗಿದೆ ಎಂದು ದೂರಿದರು.

ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಭಾರತ ಕಮ್ಯುನಿಸ್ಟ್ ಪಕ್ಷದ ಮುಖಂಡರಾದ ಬಾಬುರಾವ್ ಹೊನ್ನಾ, ಆರ್.ಪಿ. ರಾಜಾ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರಾದ ಅರುಣ ಪಟೇಲ್, ಮನೋಹರ ಹೊಸಮನಿ, ಅಶೋಕ ಗಾಯಕವಾಡ, ನಗರ ಸಂಚಾಲಕ ರಾಜಕುಮಾರ ವಾಘಮಾರೆ, ದಲಿತ ಕಲಾ ಮಂಡಳಿ ಜಿಲ್ಲಾ ಸಂಚಾಲಕ ಶಿವರಾಜ ತಡಪಳ್ಳಿ, ದಯಾಸಾಗರ ಭೆಂಡೆ, ವಾಮನ ಮೈಸಲಗೆ, ನರಸಿಂಗ್ ಮೇಟಿ, ಪ್ರಭು ಬಸಂತಪುರ, ರಮೇಶ ಬೆಲ್ದಾರ್, ದಿಲೀಪ್ ಮರಪಳ್ಳಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.