ಶನಿವಾರ, ಆಗಸ್ಟ್ 13, 2022
24 °C
ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ

ಆದಿಜಾಂಬವ ಸಂಘದಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಸುಪ್ರೀಂಕೋರ್ಟ್‍ನ ಐವರು ನ್ಯಾಯಮೂರ್ತಿಗಳ ಪೀಠ ಒಳ ಮೀಸಲಾತಿ ಪರ ಅಭಿಪ್ರಾಯ ವ್ಯಕ್ತಪಡಿಸಿದೆ. ಹಿಂದುಳಿದ ವರ್ಗಗಳಲ್ಲಿ ಒಳಮೀಸಲಾತಿ ಇರುವುದಾದರೆ ಪರಿಶಿಷ್ಟ ಜಾತಿಗಳಿಗೂ ಅನ್ವಯಿಸುವುದು ತಪ್ಪಲ್ಲ ಎನ್ನುವ ಸಂದೇಶ ನೀಡಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದರೆ ಒಳ ಮೀಸಲಾತಿ ಜಾರಿಗೊಳಿಸುವುದಾಗಿ ಚುನಾವಣೆ ಪೂರ್ವದಲ್ಲಿ ಭರವಸೆ ಕೊಟ್ಟಿದ್ದರು. ಸಮುದಾಯ ಬೆಂಬಲ ನೀಡಿತ್ತು. ವಿಧಾನ ಮಂಡಲ ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕಡ್ಯಾಳ, ಕಾರ್ಯಾಧ್ಯಕ್ಷ ಜೈರಾಜ ಸದ್ಲಾಪುರೆ, ಉಪಾಧ್ಯಕ್ಷರಾದ ಸುಭಾಷ ವರ್ಮಾ, ಯಶವಂತ, ಮಾದರ ಚನ್ನಯ್ಯ ಹೋರಾಟ ಸಮಿತಿಯ ರಾಜ್ಯ ಅಧ್ಯಕ್ಷ ರಮೇಶ ಕಟ್ಟಿತೂಗಾಂವ, ಸಿ.ಎಂ. ದಾಸ, ಸಂಜುಕುಮಾರ ಬೇಂದ್ರೆ, ಬಂಟಿ ದರ್ಬಾರೆ, ಪ್ರಸಾದ ಮನ್ನಳ್ಳಿ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.