ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಜೇಷ್ಠತೆ ಆಧರಿಸಿ ಗೌರವಧನ ಹೆಚ್ಚಳಕ್ಕೆ ಆಗ್ರಹ
Last Updated 21 ಸೆಪ್ಟೆಂಬರ್ 2020, 16:19 IST
ಅಕ್ಷರ ಗಾತ್ರ

ಬೀದರ್: ಜೇಷ್ಠತೆ ಆಧರಿಸಿ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಪಿಂಚಣಿ ಸೌಲಭ್ಯ ಒದಗಿಸಬೇಕು. ಇಎಸ್‍ಐ, ಭವಿಷ್ಯ ನಿಧಿ ಯೋಜನೆ ಜಾರಿಗೊಳಿಸಬೇಕು. ಎಲ್‍ಕೆಜಿ, ಯುಕೆಜಿ ತರಗತಿಗಳನ್ನು ಅಂಗನವಾಡಿಗಳಲ್ಲೇ ಆರಂಭಿಸಬೇಕು. ಅಧಿಕಾರಿಗಳ ದಬ್ಬಾಳಿಕೆ ನಿಲ್ಲಿಸಬೇಕು. ಗುಣಮಟ್ಟದ ಆಹಾರ ಪೂರೈಸಬೇಕು ಎಂದು ಒತ್ತಾಯಿಸಿದರು.

ಫೆಡರೇಷನ್ ಜಿಲ್ಲಾ ಸಂಚಾಲಕ ಶಿವರಾಜ ಕಟಗಿ, ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT