ಹುಮನಾಬಾದ್: ಕೇಂದ್ರ ಸರ್ಕಾರ ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಹತ್ತಿರ ಟೈರ್ಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ್ ಪಾಟೀಲ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರಿಗೆ ಹೈರಾಣು ಮಾಡುತ್ತಿದ್ದಾರೆ. ಆದರೆ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳು ಜಾರಿಗೆ ತಂದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದೆ. ಆದರೆ ಬಿಜೆಪಿ ಕೇವಲ ಸುಳ್ಳು ಹೇಳಿಕೊಂಡು ಜನರಿಗೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇಲ್ಲಿಯ ಸ್ಥಳೀಯ ಬಿಜೆಪಿ ಶಾಸಕರು ಸಹ ಕ್ಷೇತ್ರದ ಅಭಿವೃದ್ಧಿ ಮಾಡುವುದು ಬಿಟ್ಟು ಬರೀ ಸುಳ್ಳು ಆರೋಪಗಳನ್ನು ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ದೂರಿದರು.

ಸೈಯದ್ ಯ್ಯಾಸಿನ್ ಅಲಿ ಮಾತನಾಡಿ, ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಒಳ್ಳೆಯ ದಿನಗಳು ಬರಲಿವೆ ಎಂದು ಹೇಳಿದ್ದರು. ಆದರೆ ಈವರೆಗೂ ಬಂದಿಲ್ಲ. ಮನೆ ಬಳಕೆಯ ಎಲ್ಪಿಜಿ ಗ್ಯಾಸ್ ಬೆಲೆಯನ್ನು ಏಕಾಏಕಿ ₹50 ಏರಿಕೆ ಮಾಡಿ ಬಡ ಹಾಗೂ ಮಧ್ಯಮ ವರ್ಗದವರ ಮೇಲೆ ಹೊರೆ ಹೊರೆಸಿದ್ದಾರೆ. ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಏರಿಕೆ ಮಾಡಿರುವುದರಿಂದ ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದೆ. ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಜನರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಇಂತಹ ಜನವಿರೋಧಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೇವಣಸಿದ್ದಪ್ಪ ಪಾಟೀಲ, ಓಂಕಾರ ತುಂಬಾ, ಉಮೇಶ್ ಜಮಗಿ, ರಹೀಲ್, ರುದ್ರಂ ಪಾಟೀಲ, ಗಣೇಶ ಪಾಟೀಲ್, ಮಹೇಶ ಅಗಡಿ, ಮಲ್ಲಿಕಾರ್ಜುನ ಪ್ರಭಾ, ಶ್ರೀಮಂತ ಪಾಟೀಲ, ಸುರೇಶ ಘಾಂಗ್ರೆ, ಸಚಿನ್ ಸೇರಿದಂತೆ ಇತರರು ಹಾಜರಿದ್ದರು.

‘ಅಂಬೇಡ್ಕರ್ಗೆ ಭಾರತರತ್ನ ಕೊಟ್ಟಿದ್ದು ಬಿಜೆಪಿಯಲ್ಲ’

ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಸಾಮಾನ್ಯ ಜ್ಞಾನವೂ ಇಲ್ಲದವರು ಈಗ ದೊಡ್ಡ ಅನುಯಾಯಿಗಳಂತೆ ಮಾತನಾಡುತ್ತಿದ್ದಾರೆ. ಅಂಬೇಡ್ಕರರ ಜೀವನ ಚರಿತ್ರೆ ಸಹ ಅವರಿಗೆ ಗೊತ್ತಿಲ್ಲ. ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದ್ದು ವಿ.ಪಿ.ಸಿಂಗ್ ಅವರ ಸರ್ಕಾರ ಎಂಬುದನ್ನು ತಿಳಿಯಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ ಬಾಬು ಟೈಗರ್ ಅವರು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರ ಹೆಸರು ಹೇಳದೇ ಪರೋಕ್ಷ ವಾಗ್ದಾಳಿ ನಡೆಸಿದರು. ಪಟ್ಟಣದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರಿಗೆ ಬಿಜೆಪಿ ಸರ್ಕಾರ ಭಾರತ ರತ್ನ ನೀಡಿ ಗೌರವಿಸಿದೆ ಎಂದು ಹೇಳಿರುವುದು ಖಂಡನೀಯ. ಅಂಬೇಡ್ಕರ್ ಭಾರತರತ್ನ ದೊರತೆ ಸಂದರ್ಭದಲ್ಲಿ ಲೋಕಸಭೆಯಲ್ಲಿ 8 ಮಂದಿ ಬಿಜೆಪಿ ಸದಸ್ಯರಿದ್ದರು. ಕೇವಲ 8 ಸಂಸದರನ್ನು ಇಟ್ಟುಕೊಂಡು ಹೇಗೆ ಸರ್ಕಾರ ರಚನೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು . ‘ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ತಪ್ಪಿನಿಂದಾಗಿ ನಿಮಗೆ ಅಧಿಕಾರ ಬಂದಿದೆ. ನಿಮ್ಮನ್ನು ನೋಡಿ ಈ ಅಧಿಕಾರ ಬಂದಿಲ್ಲ. ಬರುವ ದಿನಗಳಲ್ಲಿ ನಿಮಗೆ ತಕ್ಕ ಪಾಠ ಕಲಿಸಲಿದ್ದೇವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.