ಗುರುವಾರ , ಮಾರ್ಚ್ 23, 2023
28 °C
ಡ್ರಗ್ಸ್ ದಂದೆ: ದೇಶದ್ರೋಹ ಪ್ರಕರಣ ದಾಖಲಿಗೆ ಆಗ್ರಹ

ಹಿಂದೂ ಬ್ರಿಗೇಡ್‍ನಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ರಾಜ್ಯದಲ್ಲಿ ಡ್ರಗ್ಸ್ ದಂದೆಯಲ್ಲಿ ತೊಡಗಿಕೊಂಡವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಹಿಂದೂ ಬ್ರಿಗೇಡ್ ಜಾಗೃತಿ ಸಂಘವು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.

ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಡ್ರಗ್ಸ್ ಜಾಲದವರು ಯುವಕರು ಹಾಗೂ ವಿದ್ಯಾರ್ಥಿಗಳು ಡ್ರಗ್ಸ್ ದಾಸರಾಗುವಂತೆ ಮಾಡುತ್ತಿದ್ದಾರೆ. ಸರ್ಕಾರ, ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಿ, ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಡಗಿ, ಉಪಾಧ್ಯಕ್ಷ ಸೀನು ಮಾಶೆಟ್ಟಿ, ಖಜಾಂಚಿ ಸಂತೋಷ ಭಂಡೆ ನೇತೃತ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು