ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಪಥ ಯೋಜನೆ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

Last Updated 23 ಜೂನ್ 2022, 14:03 IST
ಅಕ್ಷರ ಗಾತ್ರ

ಬೀದರ್: ಅಗ್ನಿಪಥ ಯೋಜನೆ ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಗತಿ ಪರ ಸಂಘಟನೆಗಳ ಒಕ್ಕೂಟವು ನಗರದಲ್ಲಿ ಪ್ರತಿಭಟನೆ ನಡೆಸಿತು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ಒಕ್ಕೂಟದ ಪದಾಧಿಕಾರಿಗಳು ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಅಗ್ನಿವೀರರಿಗೆ ಬಿಜೆಪಿ ಕಚೇರಿಯಲ್ಲಿ ಭದ್ರತಾ ಸಿಬ್ಬಂದಿ ಕೆಲಸ ಕೊಡುವುದಾಗಿ ಹೇಳಿ ಅವಮಾನಿಸಿರುವ ಬಿಜೆಪಿ ಮುಖಂಡ ಕೈಲಾಸ ವಿಜಯವರ್ಗಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಕೇಂದ್ರ ಸಚಿವ ಜಿ. ಕಿಶನರೆಡ್ಡಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಒಕ್ಕೂಟದ ಸಂಚಾಲಕ ಬಾಬುರಾವ್ ಹೊನ್ನಾ, ಸಹ ಸಂಚಾಲಕರಾದ ಮಾರುತಿ ಬೌದ್ಧೆ, ವಹೀದ್ ಲಖನ್, ರಾಜಕುಮಾರ ಮೂಲಭಾರತಿ, ಅಲಿ ಅಹಮ್ಮದ್ ಖಾನ್, ಶೇಕ್ ಅನ್ಸಾರ್, ಉಮೇಶಕುಮಾರ ಸ್ವಾರಳ್ಳಿಕರ್, ಮುಬಾಸಿರ್ ಸಿಂಧೆ, ಸೋಮನಾಥ ಪಂಚಾಳ, ನಜೀರ್ ಅಹಮ್ಮದ್, ಅರುಣ ಪಟೇಲ್, ರಾಜಕುಮಾರ ಗುನ್ನಳ್ಳಿ, ಶಿವಕುಮಾರ ನೀಲಿಕಟ್ಟಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT