ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷಾ ನಿರ್ಧಾರ ಕೈಬಿಡಲು ಒತ್ತಾಯಿಸಿ ಪ್ರತಿಭಟನೆ

Last Updated 23 ಜೂನ್ 2021, 15:58 IST
ಅಕ್ಷರ ಗಾತ್ರ

ಬೀದರ್: ಕಳೆದ ಸೆಮಿಸ್ಟರ್ ಪರೀಕ್ಷೆ ನಡೆಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ಫಾರ್ಮಸಿ ವಿದ್ಯಾರ್ಥಿಗಳು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಅಖಿಲ ಕರ್ನಾಟಕ ಪ್ರತಿಭಟನಾ ದಿನದ ಪ್ರಯುಕ್ತ ಬೀದರ್‍ನಲ್ಲಿ ಜಿಲ್ಲಾಧಿಕಾರಿ ಕಚೇರಿ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಬಸವಕಲ್ಯಾಣ, ಔರಾದ್ ಹಾಗೂ ಭಾಲ್ಕಿ ತಹಶೀಲ್ದಾರ್ ಕಚೇರಿ ಎದುರು ಕೈಯಲ್ಲಿ ಫಲಕ ಹಿಡಿದು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಬರೆದ ಮನವಿ ಪತ್ರವನ್ನು ಅಧಿಕಾರಿಗಳಿಗೆ ಸಲ್ಲಿಸಿದರು.

ಗೂಗಲ್ ಫಾರ್ಮ್ ಸಮೀಕ್ಷೆಯಲ್ಲಿ 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ಕಳೆದ ಸೆಮಿಸ್ಟರ್ ಪರೀಕ್ಷೆಯನ್ನು ಪ್ರಸ್ತುತ ಸೆಮಿಸ್ಟರ್ ಪರೀಕ್ಷೆಯೊಂದಿಗೆ ನಡೆಸಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಂದೇ ತಿಂಗಳಲ್ಲಿ ಎರಡು ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ಹೇಳಿದರು.

ಪರೀಕ್ಷೆ ಕುರಿತು ಸಂಬಂಧಪಟ್ಟವರ ಅಭಿಪ್ರಾಯ ಪಡೆಯದೆ ಏಕಪಕ್ಷೀಯ ನಿರ್ಧಾರ ಕೈಗೊಳ್ಳಬಾರದು. ವಿದ್ಯಾರ್ಥಿ ಸಮೂಹದ ಮೇಲೆ ವಿಪರೀತ ಹೊರೆ ಹೇರಬಾರದು. ಆಫ್‍ಲೈನ್ ತರಗತಿ ಆರಂಭಿಸುವ ಮುನ್ನ ಎಲ್ಲ ವಿದ್ಯಾರ್ಥಿಗಳಿಗೂ ಕೋವಿಡ್ ಲಸಿಕೆ ಕೊಡಬೇಕು ಎಂದು ಒತ್ತಾಯಿಸಿದರು.

ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಜಿಲ್ಲಾ ಘಟಕದ ಸಂಚಾಲಕ ಹಣಮಂತ ಎಸ್.ಎಚ್, ಸದಸ್ಯ ಲಕ್ಷ್ಮಣ ಮಚಕೂರೆ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT