ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಬಿಇಒ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

ಭಾಲ್ಕಿ ಶ್ರೀಗಳ ಕುರಿತು ಅನುಚಿತ ಪದ ಬಳಕೆ
Last Updated 1 ಅಕ್ಟೋಬರ್ 2020, 16:13 IST
ಅಕ್ಷರ ಗಾತ್ರ

ಬೀದರ್: ಭಾಲ್ಕಿ ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಅವರ ಕುರಿತು ಅನುಚಿತ ಪದ ಬಳಸಿರುವ ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕಮಲನಗರ ಸಿಆರ್‍ಪಿ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ)ಯ ಕಾರ್ಯಕರ್ತರು ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಕಚೇರಿ ಆವರಣದಲ್ಲಿ ಘೋಷಣೆ ಕೂಗಿ ಕೆಲ ಹೊತ್ತು ಧರಣಿ ನಡೆಸಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ ಅವರಿಗೆ ಬರೆದ ಮನವಿ ಪತ್ರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸಲ್ಲಿಸಿದರು.

ದೂರವಾಣಿ ಸಂಭಾಷಣೆ ವೇಳೆ ಸಿಆರ್‍ಪಿ ಅವರು ಶ್ರೀಗಳ ಹೆಸರು ಪ್ರಸ್ತಾಪಿಸಿದಾಗ ಕ್ಷೇತ್ರ ಶಿಕ್ಷಣಾಧಿಕಾರಿ ಏಕವಚನ ಬಳಸಿರುವುದು ಅವರ ಭಕ್ತರ ಮನಸ್ಸಿಗೆ ನೋವು ಉಂಟು ಮಾಡಿದೆ ಎಂದು ಹೇಳಿದರು.

ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ, ಉಪಾಧ್ಯಕ್ಷರಾದ ನಾಗಪ್ಪ ಜಾನಕನೋರ, ಸಂತೋಷ ಚೆಟ್ಟಿ, ಸುಧಾಕರ ರಾಠೋಡ್, ಪ್ರಧಾನ ಕಾರ್ಯದರ್ಶಿ ಗೋಪಾಲ ಕುಲಕರ್ಣಿ, ಸೋಮಶೇಖರ ಸಜ್ಜನಶೆಟ್ಟಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT