ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

Last Updated 8 ಜುಲೈ 2021, 14:02 IST
ಅಕ್ಷರ ಗಾತ್ರ

ಬೀದರ್: ಕೋವಿಡ್ ಕಾರಣ ಪದವಿ ಹಾಗೂ ಡಿಪ್ಲೊಮಾ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಬಂದ ವಿದ್ಯಾರ್ಥಿಗಳು, ಜಿಲ್ಲಾಧಿಕಾರಿ ಕಚೇರಿ ಎದುರು ಕೆಲ ಕಾಲ ಧರಣಿ ನಡೆಸಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ರಾಜ್ಯದಲ್ಲಿ ದ್ವಿತೀಯ ಪಿಯುಸಿಯಂತೆ, ಎಸ್ಸೆಸ್ಸೆಲ್ಸಿ, ಡಿಪ್ಲೊಮಾ, ಸ್ನಾತಕ, ಸ್ನಾತಕೋತ್ತರ ಪದವಿ ಹಾಗೂ ಕಾನೂನು ಪರೀಕ್ಷೆಗಳನ್ನು ರದ್ದುಪಡಿಸಬೇಕು. ಡಿಪ್ಲೊಮಾ 1, 3 ಹಾಗೂ 5ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ಪಾಸ್ ಮಾಡಬೇಕು. ಹಿಂದಿನ ಸೆಮಿಸ್ಟರ್‌ಗಳಿಗೆ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ನಂತರವೇ ಮುಂದಿನ ಸೆಮಿಸ್ಟರ್‌ಗಳ ತರಗತಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

ಫೆಡರೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೋಡಗೆ, ಉಪಾಧ್ಯಕ್ಷ ಅಮರ ಗಾದಗಿ, ಕಾರ್ಯದರ್ಶಿ ರೋಷನ್ ಮಲ್ಕಾಪುರೆ, ಪ್ರಮುಖರಾದ ಶಿವಕುಮಾರ ಕಾಶೆಂಪೂರ, ಅಮರ ಕಲಶೆಟ್ಟಿ, ಆದರ್ಶ ಪಾಟೀಲ ಮುಂದಾಳತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT