ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವ್ಯವಹಾರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

Last Updated 25 ಸೆಪ್ಟೆಂಬರ್ 2021, 15:16 IST
ಅಕ್ಷರ ಗಾತ್ರ

ಬೀದರ್: ತಾಲ್ಲೂಕಿನ ಮಲ್ಕಾಪುರ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಗೆ ಆಗ್ರಹಿಸಿ ಕರುನಾಡು ಸಿಂಹ ಗರ್ಜನೆ ಸೇನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಮನೆ, ಕಾಮಗಾರಿ, ಶೌಚಾಲಯ ಬಿಲ್ ಪಾವತಿ ಹೆಸರಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭ್ರಷ್ಟಾಚಾರ ನಡೆಸಿದ್ದಾರೆ. ಪಂಚಾಯಿತಿಯಲ್ಲಿ ನಡೆದ ಅವ್ಯವಹಾರದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಕರುನಾಡು ಸಿಂಹ ಗರ್ಜನೆ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಸ್ವರೂಪಕುಮಾರ ಸಿಂಧೆ, ಜೈ ಕನ್ನಡಿಗರ ಸೇನೆ (ಯುವ ಶಕ್ತಿ) ಜಿಲ್ಲಾ ಘಟಕದ ಅಧ್ಯಕ್ಷ ಜಗತ್ ಸಿಂದೆ, ಕರ್ನಾಟಕ ಪ್ರಜಾಶಕ್ತಿ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಸಿಂಧೆ, ಕರ್ನಾಟಕ ಕೂಲಿ ಕಾರ್ಮಿಕರ ಸಂಘದ ರಮೇಶ ಪಾಸ್ವಾನ್, ಸಂತೋಷ ಮಲ್ಕಾಪುರ, ಮಾರ್ಟಿನ್, ರಾಹುಲ್ ಡಾಂಗೆ, ಎಂ.ಡಿ. ಮೈನೊದ್ದಿನ್, ಮಿಥುನ್ ಸಿದ್ದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT