ಬೀದರ್: ಪದವಿ ಅಂತಿಮ ವರ್ಷದ ಪರೀಕ್ಷೆ ಕಾರಣ ಹಾಸ್ಟೆಲ್‍ಗಳನ್ನು ಪುನರಾರಂಭಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಡ್ಸ್ ಆರ್ಗನೈಸೇಷನ್ ನೇತೃತ್ವದಲ್ಲಿ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಪದವಿ ಅಂತಿಮ ವರ್ಷದ ಪರೀಕ್ಷೆಗಳು ಸೆಪ್ಟೆಂಬರ್ 8 ರಿಂದ ಆರಂಭವಾಗಲಿವೆ. ಆದರೆ, ಈವರೆಗೂ ಹಾಸ್ಟೆಲ್‍ಗಳನ್ನು ಪುನರಾರಂಭಿಸಿಲ್ಲ ಎಂದು ಹೇಳಿದರು.

ಕೆಲ ಕಡೆ ಬಸ್ ಸೌಕರ್ಯ ಇಲ್ಲ. ಇದ್ದರೂ, ಪರೀಕ್ಷೆಗೆ ಸರಿಯಾದ ಸಮಯಕ್ಕೆ ಹಾಜರಾಗುವುದು ಕಷ್ಟಕರವಾಗಿದೆ. ಹೀಗಾಗಿ ಹಾಸ್ಟೆಲ್ ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಆರ್ಗನೈಸೇಷನ್ ಸದಸ್ಯ ಲಕ್ಷ್ಮಣ ಪಿ. ಮಚ್ಕೂರೆ, ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಶರಣಪ್ಪ, ಪ್ರವೀಣ, ಪ್ರಶಾಂತ, ರವಿಕುಮಾರ, ವಿಜಯಕುಮಾರ, ಬೀರಗೊಂಡ, ಮಲ್ಲಿನಾಥ, ಶಿವಕುಮಾರ, ಆಕಾಶ, ಅಲೋಕ್, ನವೀನ್, ವಿಷ್ಣು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.