ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

Last Updated 8 ಸೆಪ್ಟೆಂಬರ್ 2022, 7:06 IST
ಅಕ್ಷರ ಗಾತ್ರ

ಬೀದರ್: ನಗರದಲ್ಲಿ ಹಾಳಾಗಿರುವ ರಸ್ತೆಗಳನ್ನು ಕೂಡಲೇ ದುರಸ್ತಿಪಡಿಸಬೇಕು ಎಂದು ಒತ್ತಾಯಿಸಿ ವೀರ ಕನ್ನಡಿಗರ ಸೇನೆ, ಕರ್ನಾಟಕ ಪ್ರಜಾಶಕ್ತಿ ಸಮಿತಿ, ಭೀಮಾ ಕೋರೆಗಾಂವ್ ಸೇನೆ ಸಮಿತಿ, ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಹಾ ಸಂಘ ಹಾಗೂ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕದ ಕಾರ್ಯಕರ್ತರು ನಗರದಲ್ಲಿ ಬುಧವಾರ ಜಂಟಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಘೋಷಣೆ ಕೂಗುತ್ತ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಕಳಪೆ ಕಾಮಗಾರಿಯಿಂದ ಪದೇ ಪದೇ ರಸ್ತೆಗಳು ಹಾಳಾಗುತ್ತಿವೆ. ಹದಗೆಟ್ಟ ಮುಖ್ಯರಸ್ತೆ ಹಾಗೂ ಕಾಲೊನಿಗಳ ರಸ್ತೆಗಳನ್ನು ದುರಸ್ತಿಪಡಿಸಬೇಕು ಎಂದು ಒತ್ತಾಯಿಸಿದರು.

ನಗರಸಭೆ ಆಯುಕ್ತ ಪ್ರಬುದ್ಧ ಕಾಂಬಳೆ ಅವರನ್ನು ವರ್ಗಾವಣೆ ಮಾಡಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಕಲಿ ವೈದ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. 2017 ರಿಂದ 2022 ರ ವರೆಗಿನ ವಿವಿಧ ವಸತಿ ಯೋಜನೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ವೀರ ಕನ್ನಡಿಗರ ಸೇನೆಯ ರಾಜ್ಯ ಸಂಚಾಲಕ ಸುಬ್ಬಣ್ಣ ಕರಕನಳ್ಳಿ, ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಹಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೂರ್ಯಕಾಂತ ಸಾಧುರೆ, ಭೀಮಾ ಕೋರೆಗಾಂವ್ ಸೇನೆ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಭೂಸಂಡೆ ಚಿದ್ರಿ, ಕರ್ನಾಟಕ ಪ್ರಜಾಶಕ್ತಿ ಸಮಿತಿಯ ವಿಭಾಗೀಯ ಅಧ್ಯಕ್ಷ ಪ್ರೇಮಕುಮಾರ ಕಾಂಬಳೆ, ಮುಕೇಶ ಶಹಾಗಂಜ್, ಸಂದೀಪ್ ಚಾಂಬೋಳ್, ಸಂತೋಷ್ ಸಿಂಧೆ, ರಮೇಶ ಪಾಸ್ವಾನ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT