ಮಂಗಳವಾರ, ಜನವರಿ 31, 2023
19 °C
ಭಾರತೀಯ ವಿದ್ಯಾರ್ಥಿ ಸಂಘ, ವೇದಿಕೆಯಿಂದ ಮುಖ್ಯಮಂತ್ರಿಗೆ ಮನವಿ ಪತ್ರ

ಡಿಎಚ್‍ಒ ವರ್ಗಾವಣೆಗೆ ಒತ್ತಾಯಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ ಅವರನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಜಂಟಿಯಾಗಿ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸರ್ಕಾರದ ಪೂರ್ವಾನುಮತಿ ಇಲ್ಲದೆ ಲಂಚ ಪಡೆದು ಗುತ್ತಿಗೆ ಆಧಾರದ ಮೇಲೆ ವಾಹನ ಚಾಲಕರು ಹಾಗೂ ಡಾಟಾ ಆಪರೇಟರ್‌ಗಳನ್ನು ನೇಮಕ ಮಾಡಿಕೊಂಡಿದ್ದಾರೆ. ಈ ಹಿಂದೆ ಕಾರ್ಯ ನಿರ್ವಹಿಸಿದವರಿಗೆ ಯಾವುದೇ ನೋಟಿಸ್ ಕೊಡದೆ, ಕೆಲಸದಿಂದ ತೆಗೆದು ಹಾಕಿದ್ದಾರೆ. ಹೀಗಾಗಿ ಅವರನ್ನು ತಕ್ಷಣ ವರ್ಗಾಣೆ ಮಾಡಬೇಕು. ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಭಾರತೀಯ ವಿದ್ಯಾರ್ಥಿ ಸಂಘದ ಜಿಲ್ಲಾ ಅಧ್ಯಕ್ಷ ಪ್ರದೀಪ್ ನಾಟೇಕರ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಅಮೃತ ಮುತ್ತಂಗಿಕರ್, ಕಲ್ಯಾಣ ಕರ್ನಾಟಕ ಕಟ್ಟಡ ಹಾಗೂ ಇತರೆ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಸೂರ್ಯಕಾಂತ ಸಾಧುರೆ, ಮುಕೇಶ ಚೆಲುವಾ, ಭೀಮರಾವ್ ಮಾಲಗತ್ತಿ, ಸಿದ್ಧಾರ್ಥ ಅತಿವಾಳೆ, ಸುನೀಲ್ ಚಂದ್, ಆನಂದ ಶಿಂಧೆ, ವಿಷ್ಣುವರ್ಧನ್, ಜಾನ್ ವೀರ, ಅನಿಲಕುಮಾರ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು