ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ ಸರ್ಕಾರದ ವಿರುದ್ಧ ಪ್ರತಿಭಟನೆ

Last Updated 9 ಅಕ್ಟೋಬರ್ 2020, 16:17 IST
ಅಕ್ಷರ ಗಾತ್ರ

ಜನವಾಡ: ಯುವತಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರಪ್ರದೇಶ ಸರ್ಕಾರ ಜನರ ಧ್ವನಿ ಅಡಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಬೀದರ್ ತಾಲ್ಲೂಕಿನ ಅಮಲಾಪುರ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಉತ್ತರಪ್ರದೇಶದ ಹಾಥರಸ್ ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ಸಾಂತ್ವನ ಹೇಳಲು ಹೋಗಿದ್ದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಅವರನ್ನು ಪೊಲೀಸರು ತಡೆದು, ಎಳೆದಾಡಿ ದಬ್ಬಾಳಿಕ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಚನಶೆಟ್ಟಿ ಆರೋಪಿಸಿದರು.

ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರ ನಡೆದುಕೊಂಡ ರೀತಿಯನ್ನು ತೀವ್ರವಾಗಿ ಖಂಡಿಸಲಾಗುವುದು ಎಂದು ತಿಳಿಸಿದರು.

ಮುಖಂಡರಾದ ರಶೀದ್ ಪಟೇಲ್, ನರಸಿಂಗ್ ಸಾಮ್ರಾಟ್, ರುಕ್ಮಾರೆಡ್ಡಿ ಪಾಟೀಲ, ಜುಬೇರ್ ಪಟೇಲ್, ಯೇಶಪ್ಪ ಅಮಲಾಪುರ, ಪ್ರಕಾಶ ಸಾಗರ್, ನಾಗೇಂದ್ರ ಸೈನೆ, ಲೋಕೇಶ ಕನಶೆಟ್ಟಿ, ಸುನೀಲ ಸಾಗರ್, ಜಾಫರ್ ಶೇರಿಕಾರ, ಹಣಮಂತ ಪಾಟೀಲ, ಅಂಬೇಡ್ಕರ್ ಸಾಗರ್, ಗೌತಮ, ಚಂದ್ರಕಾಂತ, ತುಕಾರಾಮ ಗೌರೆ, ಅಶೋಕ ಶೇಕಾಪುರ, ಸಂದೀಪ ಉದಗೀರೆ, ಬಸವರಾಜ ವಡ್ಡೆ, ಮಾರ್ಟಿನ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT