ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮರ್ಪಕ ಬಸ್ ಸೌಲಭ್ಯ ಒದಗಿಸಿ’

Last Updated 26 ಅಕ್ಟೋಬರ್ 2021, 4:51 IST
ಅಕ್ಷರ ಗಾತ್ರ

ಔರಾದ್: ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅಸಮರ್ಪಕ ಬಸ್ ಸೇವೆ ವಿರುದ್ಧ ‌ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಬಳಿ‌ ಸೋಮವಾರ ಪ್ರತಿಭಟನೆ ನಡೆಸಿ ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ನಿಯಂತ್ರಣಕ್ಕೆ ‌ಬಂದು ಶಾಲಾ ಕಾಲೇಜು ಆರಂಭವಾಗಿ ಎರಡು ತಿಂಗಳು ಕಳೆದರೂ ಸಮರ್ಪಕ ಬಸ್ ಸೇವೆ ಕಲ್ಪಿಸಿಲ್ಲ ಎಂದು ದೂರಿದರು.

ಬಸ್ ಸೌಲಭ್ಯದ ಕೊರತೆಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆ ಕಾಲೇಜಿಗೆ ಹೋಗಲು ಸಾಧ್ಯವಾಗದೆ ಕಲಿಕೆಗೆ ಹಿನ್ನಡೆಯಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ವಸತಿನಿಲಯ ಪೂರ್ಣ ಪ್ರಮಾಣ ದಲ್ಲಿ ಆರಂಭವಾಗಿಲ್ಲ. ಅಧಿಕಾರಿಗಳು ಪ್ರವೇಶ ಮಾಡಿಕೊ ಳ್ಳುವುದರಲ್ಲಿಯೇ ಕಾಲಹರಣ ಮಾಡಿ ವಿದ್ಯಾರ್ಥಿಗಳ‌ ಭವಿಷ್ಯಕ್ಕೆ ಕುತ್ತು ತರುತ್ತಿದ್ದಾರೆ. ಒಂದು ವಾರ ದಲ್ಲಿ ಎಲ್ಲ ಸಮಸ್ಯೆ ಪರಿಹಾ ವಾಗದಿದ್ದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ಬೇಡಿಕೆ ಕುರಿತು ಸಿರಸ್ತೆದಾರ್ ಶ್ರೀದೇವಿ ನವಾಡೆ ಅವರಿಗೆ ಮನವಿ ಸಲ್ಲಿಸಿದರು.ವಿದ್ಯಾರ್ಥಿ ಮುಖಂಡರಾದ ಹಾವಪ್ಪ ದ್ಯಾಡೆ, ಅಶೋಕ ಶೆಂಬೆಳ್ಳಿ ಹಾಗೂ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT