ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ

ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಮನವಿ
Last Updated 25 ಡಿಸೆಂಬರ್ 2021, 4:27 IST
ಅಕ್ಷರ ಗಾತ್ರ

ಬೀದರ್‌: ಕಲ್ಯಾಣ ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಆಗ್ರಹಿಸಿದೆ.

ಕಲ್ಯಾಣ ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ 89 ಸಾವಿರ ಹುದ್ದೆಗಳು, ಶಿಕ್ಷಣ ಇಲಾಖೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಕರ 18 ಸಾವಿರ ಹಾಗೂ ಕಾಲೇಜುಗಳಲ್ಲಿ 15 ಸಾವಿರ ಹುದ್ದೆಗಳು ಖಾಲಿ ಇವೆ ಎಂದು ಹೇಳಿದೆ. ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಿ ಅವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಅನಂತರೆಡ್ಡಿ ಟಿ. ಮಿರ್ಜಾಪುರ ನೇತೃತ್ವದಲ್ಲಿ ಸದಸ್ಯರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಎಸ್‌ಎಫ್‌ಐ ಆಗ್ರಹ: ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕು ಎಂದು
ಭಾರತ ವಿದ್ಯಾರ್ಥಿ ಫೆಡರೇಶನ್ ಜಿಲ್ಲಾ ಸಮಿತಿ ಅಧ್ಯಕ್ಷ ಅರುಣ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT