ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಸವಕಲ್ಯಾಣ | ಬಿಜೆಪಿ ಸದಸ್ಯತ್ವ ಪಡೆಯುವುದೇ ಹೆಮ್ಮೆ: ಮಹಾದೇವ ಹಸೂರೆ

Published 1 ಸೆಪ್ಟೆಂಬರ್ 2024, 15:24 IST
Last Updated 1 ಸೆಪ್ಟೆಂಬರ್ 2024, 15:24 IST
ಅಕ್ಷರ ಗಾತ್ರ

ಬಸವಕಲ್ಯಾಣ: ‘ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿರುವ ಬಿಜೆಪಿಯ ಸದಸ್ಯತ್ವ ಪಡೆಯುವುದೇ ಹೆಮ್ಮೆಯ ಸಂಗತಿ’ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವ ಹಸೂರೆ ಹೇಳಿದರು.

ನಗರದಲ್ಲಿ ಭಾನುವಾರ ನಡೆದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸುರೇಶ ಬಿರಾದಾರ ಮಾತನಾಡಿ, ‘ಕಾರ್ಯಕರ್ತರು ಪ್ರತಿ ಊರಲ್ಲಿಯೂ ಸದಸ್ಯತ್ವ ನೋಂದಣಿ ನಡೆಸಬೇಕು’ ಎಂದು ಸಲಹೆ ನೀಡಿದರು.

ಪಕ್ಷದ ಗ್ರಾಮೀಣ ಮಂಡಲದ ಅಧ್ಯಕ್ಷ ಜ್ಞಾನೇಶ್ವರ ಮುಳೆ, ನಗರ ಮಂಡಲದ ಅಧ್ಯಕ್ಷ ಸಿದ್ದು ಬಿರಾದಾರ, ಗೋವಿಂದರಾವ್ ಬಿರಾದಾರ, ದಯಾನಂದ ಮೇತ್ರೆ, ವೆಂಕಟರಾವ್ ಲಾಡೆ ಮಾತನಾಡಿದರು.

ಪ್ರಮುಖರಾದ ದೀಪಕ ಗಾಯಕವಾಡ, ಅಶೋಕ ವಕಾರೆ, ಅರವಿಂದ ಮುತ್ತೆ, ರತಿಕಾಂತ ಕೊಹಿನೂರ, ಸುಧೀರ ಕಾಡಾದಿ, ಪ್ರದೀಪ ಗಡವಂತೆ, ಪ್ರದೀಪ ಬೇಂದ್ರೆ, ಕಮಲಾಕರ ಮೆಕಾಲೆ, ರಾಜೀವ ರಾಜೋಳೆ, ಶಂಕರ ನಾಗದೆ, ಶಿವಪುತ್ರ ಗೌರ, ಈರಣ್ಣ ಹಲಗೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT