ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಗಿರಿ ಯಾತ್ರಿ ನಿವಾಸಕ್ಕೆ ಅನುದಾನ ಒದಗಿಸಿ

ಸಚಿವ ಸಿ.ಟಿ. ರವಿಗೆ ಸೂರ್ಯಕಾಂತ ನಾಗಮಾರಪಳ್ಳಿ ಒತ್ತಾಯ
Last Updated 13 ಅಕ್ಟೋಬರ್ 2020, 15:23 IST
ಅಕ್ಷರ ಗಾತ್ರ

ಬೀದರ್: ಬೀದರ್‌ನ ಬಸವಗಿರಿಯ ಯಾತ್ರಿ ನಿವಾಸ ಕಟ್ಟಡದ ಎರಡನೇ ಹಾಗೂ ಮೂರನೇ ಮಹಡಿ ನಿರ್ಮಾಣಕ್ಕೆ ₹ 2 ಕೋಟಿ ಅನುದಾನ ಒದಗಿಸಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ. ರವಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.

ಐತಿಹಾಸಿಕ ಭೂ ಕಾಲುವೆಯನ್ನು ಪುನರುಜ್ಜೀವನಗೊಳಿಸಿ ಪ್ರವಾಸಿ ಕೇಂದ್ರವನ್ನಾಗಿ ಮಾಡಬೇಕು. ಜಿಲ್ಲೆಯ ಗಡಿ ಭಾಗದಲ್ಲಿ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಮೂಲಸೌಕರ್ಯ ಹಾಗೂ ಕೋವಿಡ್ ನಿರ್ವಹಣೆಗಾಗಿ ತಲಾ ₹ 5 ಲಕ್ಷ ಅನುದಾನ ಕೊಡಬೇಕು. ಹಾರೂರಗೇರಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ ಕಲ್ಪಿಸಬೇಕು. ಬಿದರಿ ಬೀದರ್ ಜಿಲ್ಲೆಯ ಸಾಂಸ್ಕೃತಿಕ ವೇದಿಕೆ ಆಯೋಜಿಸುತ್ತಿರುವ ವಿಶ್ವ ಮಾನವ ದಿನಾಚರಣೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಸರ್ಕಾರ ₹ 5 ಲಕ್ಷ ವಿಶೇಷ ಅನುದಾನ ಒದಗಿಸಿ 15 ಕಲಾ ತಂಡಗಳ ಪ್ರಾಯೋಜಕತ್ವ ವಹಿಸಿಕೊಳ್ಳಬೇಕು ಎಂದು ಬೇಡಿಕೆ ಮಂಡಿಸಿದರು.

ಸೂರ್ಯಕಾಂತ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಬೇಡಿಕೆಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT