ಮಂಗಳವಾರ, ಮೇ 11, 2021
24 °C
ಜಿಲ್ಲಾಧಿಕಾರಿ ರಾಮಚಂದ್ರನ್‌ ಅಧಿಕಾರಿಗಳಿಗೆ ಸೂಚನೆ

ಸಕಾಲಕ್ಕೆ ಚುನಾವಣೆ ಅಂಕಿಅಂಶ ಕೊಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಏ.17ರಂದು ನಡೆಯಲಿರುವ ಮತದಾನದ ದಿನ ಸಂಬಂಧಪಟ್ಟ ಅಧಿಕಾರಿಗಳು ಸಕಾಲಕ್ಕೆ ಮತದಾನದ ಅಂಕಿ ಅಂಶಗಳು ಹಾಗೂ ಇತರೆ ಮಾಹಿತಿಯನ್ನು ಚುನಾವಣೆ ಅಧಿಕಾರಿಗಳಿಗೆ ಕೊಡಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೊ ಸಭಾಂಗಣದಲ್ಲಿ ಬುಧವಾರ ನಡೆದ ಮತದಾನದ ದಿನದ ಮೇಲ್ವಿಚಾರಣೆ ತಂಡಗಳಲ್ಲಿರುವ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿಯಲ್ಲಿ ಅವರು ನೋಡಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಮತದಾನ ದಿನ ಎಲ್ಲ ಮತಗಟ್ಟೆಗಳ ಸಿದ್ಧತೆಯ ಕುರಿತು ಬೆಳಿಗ್ಗೆ 5.30ರೊಳಗೆ ವರದಿ ಮಾಡಬೇಕು. 6.30ರೊಳಗೆ ಅಣುಕು ಮತದಾನ ನಡೆದ ಬಗ್ಗೆ ವರದಿ ನೀಡಬೇಕು. ನಮೂನೆ 47ರ ಮೂಲಕ ಮತದಾನ ದಿನದ ವಿವಿಧ ಕಾರ್ಯ ಚಟುವಟಿಕೆಗಳ ವರದಿ ಸಲ್ಲಿಸಬೇಕು. 26 ಸೆಕ್ಟರ್ ಅಧಿಕಾರಿಗಳಿಂದ ಪೋಲ್ ಕ್ಲೋಸರ್ ವರದಿ ಪಡೆದು ಸಕಾಲಕ್ಕೆ ಸಲ್ಲಿಸಬೇಕು ಎಂದು ತಿಳಿಸಿದರು.

ಪ್ರತಿ ಮತಗಟ್ಟೆಗಳಿಗೆ ಓಆರ್‍ಎಸ್ ಪ್ಯಾಕೇಟ್ ಸೇರಿದಂತೆ 350 ಮೆಡಿಕಲ್ ಕಿಟ್‍ಗಳ ವ್ಯವಸ್ಥೆ ಮಾಡಬೇಕು. ಮಸ್ಟರಿಂಗ್ ಸೆಂಟರ್‌ನಲ್ಲಿ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯವಾಗದಂತೆ ಜೆಸ್ಕಾಂ ಅಧಿಕಾರಿಗಳಿಗೆ ಪತ್ರ ಬರೆದು ಸೂಚಿಸಬೇಕು ಎಂದು ಸೂಚನೆ ನೀಡಿದರು.

ಮತದಾನ ದಿನ ದಾಖಲಾಗುವ ಶೇಖಡಾವಾರು ಮತದಾನದ ವಿವರವನ್ನು ಕಾಲಕಾಲಕ್ಕೆ ಸಲ್ಲಿಸಲು ಕ್ರಮ ವಹಿಸಬೇಕು ಎಂದು ವಾರ್ತಾಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಮಾತನಾಡಿ, ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ಅನುಕೂಲವಾಗುವಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಬೇಕು. ಒಟ್ಟು ಮತಗಟ್ಟೆಗಳ ಪೈಕಿ 172 ಮತಗಟ್ಟೆಗಳಲ್ಲಿ ಅಂಗವಿಕಲ ಮತದಾರರು ಇರುವುದನ್ನು ಗುರುತಿಸಲಾಗಿದೆ. ಅಲ್ಲಿ ವೀಲ್‌ಚೇರ್ ಮತ್ತು ವಾಹನದ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ತಹಶೀಲ್ದಾರ್ ನಾಗಯ್ಯ ಹಿರೇಮಠ, ಅಣ್ಣಾರಾವ್ ಪಾಟೀಲ, ಜಯಶ್ರೀ, ಪೌರಾಯುಕ್ತ ಗೌತಮ ಕಾಂಬಳೆ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶರಣಯ್ಯ ಮಠಪತಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.