ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚೌಡಯ್ಯ ನಿಗಮಕ್ಕೆ ₹200 ಕೋಟಿ ನೀಡಿ’

Last Updated 13 ಸೆಪ್ಟೆಂಬರ್ 2022, 13:27 IST
ಅಕ್ಷರ ಗಾತ್ರ

ಬಸವಕಲ್ಯಾಣ: ‘ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ ₹200 ಕೋಟಿ ಅನುದಾನ ಒದಗಿಸಬೇಕು’ ಎಂದು ಗಂಗಾಮತಸ್ಥ ಸಮುದಾಯದ ಹಿರಿಯ ಮುಖಂಡ ಶಂಕರರಾವ್ ಜಮಾದಾರ ಶಿವಪುರ ಆಗ್ರಹಿಸಿದ್ದಾರೆ.

ಟೋಕರಿ ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಹೆಸರಲ್ಲಿ ಗುರುತಿಸಿಕೊಂಡಿರುವ ಗಂಗಾಮತಸ್ಥ ಸಮುದಾಯವು ರಾಜ್ಯದಲ್ಲಿ 60 ಲಕ್ಷದಷ್ಟಿದೆ. ಆದರೂ, ಸರ್ಕಾರಿ ದಾಖಲೆಗಳಲ್ಲಿ ಕಡಿಮೆ ಸಂಖ್ಯೆ ನಮೂದಿಸಲಾಗಿದೆ. ಈ ಎಡವಟ್ಟನ್ನು ಶೀಘ್ರದಲ್ಲಿ ಸರಿಪಡಿಸಬೇಕು. ಈ ಸಮುದಾಯದವರಿಗೆ ರಾಜಕೀಯದಲ್ಲಿ ಹೆಚ್ಚಿನ ಪ್ರಾಧಾನ್ಯತೆ ಇಲ್ಲ. ಶೈಕ್ಷಣಿಕ, ಆರ್ಥಿಕವಾಗಿಯೂ ತೀರ ಹಿಂದುಳಿದಿದ್ದಾರೆ. ಏಳು ವರ್ಷಗಳ ಹಿಂದೆ ಇವರ ವಿಕಾಸಕ್ಕಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಆಗಿದ್ದರೂ ಸಮರ್ಪಕ ಅನುದಾನ ನೀಡಿಲ್ಲ ಎಂದಿದ್ದಾರೆ.

ಈ ಸಂಬಂಧ ಈಚೆಗೆ ನಿಜಶರಣ ಅಂಬಿಗರ ಚೌಡಯ್ಯ ಟ್ರಸ್ಟ್ ಕಾರ್ಯದರ್ಶಿ ಬಾಬುರಾವ್ ಕ್ಯಾಶೆ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಹ ಕಳುಹಿಸಲಾಗಿದೆ. ಇದಕ್ಕೂ ಮೊದಲು ಕೂಡ ಅನೇಕ ಸಲ ವಿನಂತಿಸಲಾಗಿದೆ. ಆದರೂ, ಕ್ರಮ ತೆಗೆದುಕೊಂಡಿಲ್ಲ. ಇನ್ನು ಮುಂದಾದರೂ ಅನುದಾನ ಹೆಚ್ಚಿಸಬೇಕು ಎಂದು ಅವರು ಪ್ರಕಟಣೆಯ ಮೂಲಕ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT