ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಚೋದನಕಾರಿ ಭಾಷಣ: ಇಬ್ಬರ ಬಂಧನ

Published 21 ಏಪ್ರಿಲ್ 2024, 14:32 IST
Last Updated 21 ಏಪ್ರಿಲ್ 2024, 14:32 IST
ಅಕ್ಷರ ಗಾತ್ರ

ಬೀದರ್: ‘ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಶನಿವಾರ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಹಾಗೂ ಕನ್ನಡ ಪರ ಹೋರಾಟಗಾರ ವೀರೂಪಾಕ್ಷ ಗಾದಗಿ ಅವರನ್ನು ಬಂಧಿಸಿ, ಬಿಡುಗಡೆ ಮಾಡಲಾಗಿದೆ.

ನಗರದ ಬಸವೇಶ್ವರ ವೃತ್ತದ ಬಳಿ ಕಾಲೇಜು ವಿದ್ಯಾರ್ಥಿಗಳು, ಹಿಂದೂ ಪರ ಮುಖಂಡರು ಸೇರಿದ ಬಹಿರಂಗ ಸಭೆಯಲ್ಲಿ ಮಾತನಾಡಿದ ಮುಖಂಡ ವಿರೂಪಾಕ್ಷ ಗಾದಗಿ, ‘ನೇಹಾ ಹಿರೇಮಠ ಹತ್ಯೆ ಬಗ್ಗೆ ಗೃಹ ಸಚಿವ ಪರಮೇಶ್ವರ ನೀಡಿರುವ ಹೇಳಿಕೆಯನ್ನು ಖಂಡಿಸಿದ್ದರು. ಅಲ್ಲದೇ ಪರಮೇಶ್ವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ.

‘ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ, ‘ಪೌರಾಡಳಿತ ಸಚಿವ ರಹೀಂ ಖಾನ್ ನಾಲಾಯಕ್, ಬುದ್ಧಿಗೇಡಿ, ಮೂರ್ಖನಾಗಿದ್ದಾನೆ’ ಎಂದಿದ್ದಾರೆ. ಇನ್ನು ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ಓದುವ ಹೆಣ್ಣು ಮಕ್ಕಳು ಡಾಕ್ಟರ್ ಆಗಬಹುದು. ಆದರೆ ಹಿಂದೂ ಹೆಣ್ಣು ಆಗಿ ಉಳಿಯುವುದಿಲ್ಲ’ ಎಂದಿದ್ದರು.

‘ಈ ರೀತಿ ಪ್ರಚೋದನಕಾರಿ ಭಾಷಣ ಮಾಡಿ ಸಮುದಾಯಗಳ ಸೌಹಾರ್ದತೆಗೆ ಧಕ್ಕೆ ಉಂಟುಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಧನರಾಜ ಹಂಗರಗಿ, ವಿನೋದಕುಮಾರ ಅಪ್ಪೆ, ಪ್ರಶಾಂತ ದಶರಥ ದೊಡ್ಡಿ, ಹಣಮಂತ ಮಲ್ಕಾಪುರೆ ನೀಡಿದ ದೂರಿನನ್ವಯ ಇಬ್ಬರನ್ನು ಬಂಧಿಸಲಾಗಿದೆ‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್. ಎಲ್ ತಿಳಿಸಿದ್ದಾರೆ.

ಇಬ್ಬರನ್ನು ಸಂಜೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ವಿರೂಪಾಕ್ಷ ಗಾದಗಿ
ವಿರೂಪಾಕ್ಷ ಗಾದಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT