ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಯೊಬ್ಬರಲ್ಲೂ ಇದೆ ಅಗಾಧ ಶಕ್ತಿ: ಸ್ವಾಮಿ ಜ್ಯೋತಿರ್ಮಯಾನಂದ

Last Updated 24 ಅಕ್ಟೋಬರ್ 2018, 14:13 IST
ಅಕ್ಷರ ಗಾತ್ರ

ಬೀದರ್: ‘ಪ್ರತಿಯೊಬ್ಬರಲ್ಲೂ ಅಗಾಧ ಶಕ್ತಿ ಇದೆ. ವಿದ್ಯಾರ್ಥಿಗಳು ತಮ್ಮಲ್ಲಿನ ಶಕ್ತಿಯನ್ನು ಅರಿತು, ಛಲದಿಂದ ಸಾಧನೆ ಮಾಡಿ ತೋರಿಸಬೇಕು’ ಎಂದು ಆಶ್ರಮದ ಅಧ್ಯಕ್ಷ ಸ್ವಾಮಿ ಜ್ಯೋತಿರ್ಮಯಾನಂದ ಹೇಳಿದರು.

ಶಿವನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಬುಧವಾರ ವಿವೇಕಾನಂದ ಅಕಾಡೆಯಿಂದ ಟಿಇಟಿ ಪರೀಕ್ಷಾರ್ಥಿಗಳಿಗೆ ಆಯೋಜಿಸಿದ್ದ ಶೈಕ್ಷಣಿಕ ಮನೋವಿಜ್ಞಾನ ಕಾರ್ಯಾಗಾರದ ಉದ್ಘಾಟನೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವವಿದೆ. ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂಬಂಧ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ದೊಡ್ಡ ಸವಾಲು ಎನಿಸಿವೆ. ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎನ್ನುವ ಪ್ರಶ್ನೆಗಳು ಕಾಡುತ್ತವೆ. ಈ ಎಲ್ಲ ಸಮಸ್ಯೆ, ಆತಂಕ, ಗೊಂದಲಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ವಿವೇಕಾನಂದ ಅಕಾಡೆಮಿ ಆರಂಭಿಸಲಾಗಿದೆ’ ಎಂದು ತಿಳಿಸಿದರು.

ಪತ್ರಕರ್ತ ವಾದಿರಾಜ ವ್ಯಾಸಮುದ್ರ ಮಾತನಾಡಿ, ‘ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಅನೇಕರು ಶೈಕ್ಷಣಿಕವಾಗಿ ಸಾಧನೆ ಮಾಡಿದ್ದಾರೆ’ ಎಂದು ಹೇಳಿದರು.

‘ರಾಜ್ಯದ ವಿವಿಧ ಇಲಾಖೆಗಳಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಅಭಿವೃದ್ಧಿಗೆ ಖಾಲಿ ಹುದ್ದೆಗಳು ಮಾರಕ. ಶಿಕ್ಷಕರ ಹುದ್ದೆಗಳು ಖಾಲಿ ಇದ್ದಷ್ಟು ಮಕ್ಕಳ ಶೈಕ್ಷಣಿಕ ಭವಿಷ್ಯದ ಮೇಲೆ ಪರಿಣಾಮ ಬೀಳುತ್ತದೆ. ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ’ ಎಂದು ವಿಷಾದ ವ್ಯಕ್ತಪಡಿಸಿದರು.

ಧಾರವಾಡದ ಮನೋವಿಜ್ಞಾನ ಉಪನ್ಯಾಸಕ ಟಿ.ಪಿ.ಮಂಜುನಾಥ ಕಾರ್ಯಾಗಾರ ನಡೆಸಿಕೊಟ್ಟರು.ಡಾ. ವಿಜಯಶ್ರೀ ಬಶೆಟ್ಟಿ, ಸಂಪನ್ಮೂಲ ವ್ಯಕ್ತಿಗಳಾದ ವೀಣಾ ಜಲಾದೆ, ಉಮಾಕಾಂತ ದೇವರಮನಿ, ಸುನೀಲ್, ಬಸೀರ್ ಇದ್ದರು. ವಿಜಯಕುಮಾರ ನಿರೂಪಣೆ ಮಾಡಿದರು. ಶಿಕ್ಷಕ ಹಣಮಂತ ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT