ಬುಧವಾರ, ಏಪ್ರಿಲ್ 14, 2021
24 °C
ಮುಧೋಳ(ಬಿ) ಗ್ರಾಮಸ್ಥರಿಂದ ಕಂದಾಯ ಸಚಿವರಿಗೆ ಮನವಿ ಪತ್ರ

ನಾಡ ತಹಶೀಲ್ದಾರ್ ಕಚೇರಿ ಮಂಜೂರಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕಮಲನಗರ ತಾಲ್ಲೂಕಿನ ಮುಧೋಳ(ಬಿ) ಗ್ರಾಮಕ್ಕೆ ನಾಡ ತಹಶೀಲ್ದಾರ್ ಕಚೇರಿ ಮಂಜೂರು ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ನಿಯೋಗದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.

ನಾಡ ತಹಶೀಲ್ ಕಚೇರಿ ಇಲ್ಲದ ಕಾರಣ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ಮಾಸಾಶನ, ಮನಸ್ವಿನಿ, ರೈತ ವಿಧವಾ ವೇತನ, ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಹಣಿ, ಹೋಲ್ಡಿಂಗ್, ಜನನ, ಮರಣ ಮತ್ತಿತರ ಪ್ರಮಾಣ ಪತ್ರಗಳಿಗಾಗಿ ತಾಲ್ಲೂಕು ಕೇಂದ್ರಕ್ಕೆ ಹೋಗಬೇಕಾಗಿದೆ ಎಂದು ಹೇಳಿದರು.

2019 ರಲ್ಲಿ ಅಂದಿನ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು. ಜಿಲ್ಲಾಡಳಿತ ಸಹ ನಾಡ ತಹಶೀಲ್ದಾರ್ ಕಚೇರಿ ಮಂಜೂರಾತಿಗೆ ಬೆಂಗಳೂರಿನ ಅಟಲ್‍ಜಿ ಜನಸ್ನೇಹಿ ನಿರ್ದೇಶನಾಲಯಕ್ಕೆ ಪ್ರಸ್ತಾವ ಕಳಿಸಿಕೊಟ್ಟಿದೆ ಎಂದು ತಿಳಿಸಿದರು.

8 ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮವು ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕೇಂದ್ರ ಸ್ಥಾನವೂ ಆಗಿದೆ. ತಕ್ಷಣ ನಾಡ ತಹಶೀಲ್ದಾರ್ ಕಚೇರಿ ಮಂಜೂರು ಮಾಡಿ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಬರುವ ಬಜೆಟ್‍ನಲ್ಲಿ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಮುಧೋಳ(ಬಿ) ಗ್ರಾಮ ಪಂಚಾಯಿತಿ ಸದಸ್ಯರಾದ ಸುನೀಲ್ ಹಲಬುರ್ಗೆ, ಸೋಮನಾಥ ಮುಧೋಳ ನೇತೃತ್ವದ ನಿಯೋಗದಲ್ಲಿ ಗ್ರಾಮದ ಯುವ ಮುಖಂಡರಾದ ಸಚಿನ್ ಕತ್ತೆ, ಶಿವಕಾಂತ ಗುಡ್ಡಾ, ಶಿವಾನಂದ ಬಿಚಕುಂದೆ, ಮಹೇಶ ಕಾಪ್ಸೆ, ಪರಮೇಶ್ವರ ಮೈಲಾರೆ, ಚಂದು ಕತ್ತೆ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು