ಸೋಮವಾರ, ಆಗಸ್ಟ್ 8, 2022
22 °C

ಪಿಯುಸಿ ಉಚಿತ ಪ್ರವೇಶ: 5 ರಿಂದ ಕೌನ್ಸೆಲಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಖಾಸಗಿ ಪದವಿಪೂರ್ವ ಕಾಲೇಜುಗಳಲ್ಲಿ ಪಿಯುಸಿ ಉಚಿತ ಪ್ರವೇಶ ಪಡೆಯಲು ಅರ್ಹರಾಗಿರುವ ವಿದ್ಯಾರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ(ಆಡಳಿತ), ಎಲ್ಲ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಪಟ್ಟಿಯನ್ನು ಲಗತ್ತಿಸಲಾಗಿದೆ.

ಪಿಯುಸಿ ಉಚಿತ ಪ್ರವೇಶ ಕೌನ್ಸಿಲಿಂಗ್ ಪ್ರಕ್ರಿಯೆಯು ಸೆಪ್ಟೆಂಬರ್ 5 ಮತ್ತು 6 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರ ವರೆಗೆ ನಗರದ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ.

ಪಟ್ಟಿಯಲ್ಲಿ ಹೆಸರು ಬಂದಿರುವ ವಿದ್ಯಾರ್ಥಿಗಳು/ಪಾಲಕರು ಕೌನ್ಸೆಲಿಂಗ್‍ಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್‍ನೊಂದಿಗೆ ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ನೋಂದಣಿ ಅರ್ಜಿಗಳ ನಕಲು ಪ್ರತಿಗಳನ್ನು ಮುಖ್ಯ ಮುಖ್ಯ ಶಿಕ್ಷಕರಿಂದ ದೃಢೀಕರಿಸಿ ತರಬೇಕು. ಕೌನ್ಸೆಲಿಂಗ್‍ನಲ್ಲಿ ಕೋವಿಡ್ 19 ಕುರಿತ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು