ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುದ್ಧಹಾಲು ಹೈನು ಉದ್ಯಮಕ್ಕೆ ಬುನಾದಿ: ಡಾ. ಶರಣಗೌಡ ಬಿ. ಪಾಟೀಲ

Last Updated 2 ಜೂನ್ 2021, 2:58 IST
ಅಕ್ಷರ ಗಾತ್ರ

ಜನವಾಡ: ಶುದ್ಧ ಹಾಲು ಹೈನು ಉದ್ಯಮಕ್ಕೆ ಬುನಾದಿಯಾಗಬಲ್ಲದು ಎಂದು ಹರಿಯಾಣದ ಹಿಸಾರ್ ಹೈನು ವಿಜ್ಞಾನ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಶರಣಗೌಡ ಬಿ. ಪಾಟೀಲ ಹೇಳಿದರು.

ಬೀದರ್ ತಾಲ್ಲೂಕಿನ ಜನವಾಡದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಆನ್‍ಲೈನ್‍ನಲ್ಲಿ ರೈತರಿಗೆ ಆಯೋಜಿಸಿದ್ದ ಹೈನು ಉದ್ಯಮ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶುದ್ಧ ಹಾಲಿನ ಉತ್ಪಾದನೆ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ ಮಾತನಾಡಿ, ಪ್ರಸ್ತುತ ಸಾತ್ವಿಕ ಆಹಾರಕ್ಕೆ ಬೇಡಿಕೆ ಹೆಚ್ಚಾಗಿದೆ. ಅದರಲ್ಲಿ ಹಾಲು ಸಂಪೂರ್ಣ ಸಮತೋಲನ ಆಹಾರವಾಗಿದೆ ಎಂದು ತಿಳಿಸಿದರು.

ರೈತರು ವೈಜ್ಞಾನಿಕ ಮಾಹಿತಿ ಪಡೆದು ಗುಣಮಟ್ಟದ ಅಧಿಕ ಹಾಲು ಉತ್ಪಾದಿಸಬೇಕು ಎಂದು ಹೇಳಿದರು.

ಕಲಬುರ್ಗಿ-ಬೀದರ್-ಯಾದಗಿರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಮಹಮ್ಮದ್ ಜಿಯಾವುಲ್ಲಾ, ಡಾ. ಅಕ್ಷಯಕುಮಾರ ಇದ್ದರು.

ರಾಜ್ಯದ ವಿವಿಧ ಜಿಲ್ಲೆಗಳ 62 ರೈತರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT