ಬೀದರ್: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶಾ ರಶೀದ್ ಅಹಮ್ಮದ್ ಖಾದ್ರಿ ಅವರು ಬೀದರ್ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ ಹೇಳಿದರು.
ನಗರದಲ್ಲಿ ಶಾ ರಶೀದ್ ಅಹಮ್ಮದ್ ಖಾದ್ರಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಪಕ್ಷದ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ಅವರು, ಕಲ್ಯಾಣ ಕರ್ನಾಟಕಕ್ಕೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ದೊರಕಿರುವುದು ಹೆಮ್ಮೆ ಹಾಗೂ ಅಭಿಮಾನದ ಸಂಗತಿಯಾಗಿದೆ. ಪ್ರಶಸ್ತಿಯಿಂದ ಬೀದರ್‍ನ ವಿಶ್ವ ಪ್ರಸಿದ್ಧ ಬಿದ್ರಿ ಕಲೆಗೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದರು.
ಮುಖಂಡರಾದ ನಬಿ ಖುರೇಶಿ, ಗಾಲೀಬ್ ಹಾಷ್ಮಿ, ಸರ್ಫರಾಜ್, ಇಮ್ರಾನ್, ಕಿರ್ಮಾನಿ, ಶಫಿ, ಜೆಡಿಎಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಜ್ಜಾದ್, ನಗರ ಘಟಕದ ಅಧ್ಯಕ್ಷ ಸುದರ್ಶನ್ ಸುಂದರರಾಜ್ ಮೊದಲಾದವರು ಇದ್ದರು.

ವಿವಿಧ ಸಂಘಟನೆಗಳಿಂದ ಸನ್ಮಾನ:

ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶಾ ರಶೀದ್ ಅಹಮ್ಮದ್ ಖಾದ್ರಿ ಅವರನ್ನು ವಿವಿಧ ಸಂಘಟನೆಗಳ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಸನ್ಮಾನಿಸಿದರು.

ಖಾದ್ರಿ ಅವರ ನಿವಾಸದಲ್ಲಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.ಗೊಂಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ತುಕಾರಾಮ ಚಿಮಕೋಡ್, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ದೀಪಕ್ ಚಿದ್ರಿ, ಜೈ ಭಾರತ ಮಾತಾ ಸೇವಾ ಸಮಿತಿಯ ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಪಪ್ಪು ಪಾಟೀಲ ಖಾನಾಪುರ, ಯುವ ಉದ್ಯಮಿ ಜಗನ್ನಾಥ ಬನಾವ್, ಸಾಮಾಜಿಕ ಕಾರ್ಯಕರ್ತರಾದ ಸಂಜು ಯಾದವ್, ಸುಧಾಕರ್ ರಾಠೋಡ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಪ್ರತಿನಿಧಿ ಸಂಜೀವ ಅಲ್ಲೂರೆ ಇದ್ದರು.

ಪತ್ರಕರ್ತರ ಸಂಘ:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪದ್ಮಶ್ರೀ ಪುರಸ್ಕೃತ ಪುರಸ್ಕೃತ ಶಾ ರಶೀದ್ ಅಹಮ್ಮದ್ ಖಾದ್ರಿ ಅವರನ್ನು ಸನ್ಮಾನಿಸಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಕಾರ್ಯದರ್ಶಿ ಪೃಥ್ವಿರಾಜ್ ಎಸ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಗೋಪಿಚಂದ ತಾಂಬುಳೆ, ರಾಷ್ಟ್ರೀಯ ಜಾನಪದ ಬುಡಕಟ್ಟು ಹಾಗೂ ಕಲಾ ಪರಿಷತ ಕಾರ್ಯದರ್ಶಿ ಡಾ. ರಾಜಕುಮಾರ ಹೆಬ್ಬಾಳೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.