ಬೀದರ್: ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್ ಅವರು ಶನಿವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.
.ಬೀದರ್ | ಅತಿವೃಷ್ಟಿ ಹಾನಿ; ಸಿಎಂ ಪರಿಹಾರದ ಭರವಸೆ.
ತಾಲ್ಲೂಕಿನ ಜನವಾಡ, ಹಿಪ್ಪಳಗಾಂವ್, ಚಾಂಬೋಳ ಗ್ರಾಮ ಮತ್ತು ಸೇತುವೆ, ಕನಳ್ಳಿ, ಶ್ರೀಮಂಡಲ, ಕಂಗಟಿ, ಬಸಂತಪುರ, ಚಿಮಕೋಡ್, ಫತೇಪೂರ, ಖಾಜಾಪೂರ ಗ್ರಾಮಗಳಿಗೆ ಭೇಟಿ ಕೊಟ್ಟು ಪರಿಸ್ಥಿತಿಯ ಅವಲೋಕನ ನಡೆಸಿದರು. ಸ್ಥಳೀಯ ರೈತರ ಸಮಸ್ಯೆ ಆಲಿಸಿದರು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಭಾರಿ ಮಳೆಗೆ ಹೆಸರು, ಉದ್ದು ಸೋಯಾಬೀನ್, ತೊಗರಿ ಸಂಪೂರ್ಣವಾಗಿ ನಾಶವಾಗಿದೆ. ವಿವಿಧ ಕಡೆಗಳಲ್ಲಿ ಅನೇಕ ಮನೆಗಳು ಕುಸಿದಿವೆ. ಹಾನಿಯ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದ್ದು, ವರದಿ ಬಂದ ನಂತರ ರೈತರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
.ಸತತ ಮಳೆಗೆ ಕುಸಿದು ಬಿದ್ದ ಬೀದರ್ ಕೋಟೆ ಗೋಡೆ.
ಬೆಳೆ ಹಾನಿ ಮತ್ತು ಮನೆ ಹಾನಿಗೆ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ಅಡಿಯಲ್ಲಿ ತಕ್ಷಣ ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿಗಳಿಗೆ ಕ್ಷೇತ್ರದ ಪರಿಸ್ಥಿತಿ ಬಗ್ಗೆ ವಿವರಿಸಲಾಗಿದೆ. ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಾಗಿದೆ ಎಂದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಬೀದರ್ ಉಪವಿಭಾಗಾಧಿಕಾರಿ ಮುಹಮ್ಮದ್ ಶಕೀಲ್, ಬೀದರ್ ತಹಶೀಲ್ದಾರ್ ರವೀಂದ್ರ ದಾಮಾ, ಕೃಷಿ ಇಲಾಖೆ ಉಪನಿರ್ದೇಶಕ ಇಕ್ಬಾಲ್ ಅನ್ಸಾರಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.
.ಬೀದರ್ | ವಾರದೊಳಗೆ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರ ವಿತರಣೆ: ಸಚಿವ ರಹೀಂ ಖಾನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.