ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಚಿವ, ಮಗನ ಕುಮ್ಮಕ್ಕಿನಿಂದ ಸುಳ್ಳು ಕೇಸ್‌: ಸೋಮನಾಥ ಪಾಟೀಲ ಆರೋಪ

Published 30 ಮೇ 2024, 14:28 IST
Last Updated 30 ಮೇ 2024, 14:28 IST
ಅಕ್ಷರ ಗಾತ್ರ

ಬೀದರ್‌: ‘ಪೌರಾಡಳಿತ ಸಚಿವ ರಹೀಂ ಖಾನ್ ಹಾಗೂ ಅವರ ಮಗನ ಕುಮ್ಮಕ್ಕಿನಿಂದ ಗುರುನಾನಕ ದೇವ್‌ ಎಂಜಿನಿಯರಿಂಗ್‌ ಕಾಲೇಜಿನ ಹಿಂದೂ ವಿದ್ಯಾರ್ಥಿಗಳ ವಿರುದ್ಧ ಸುಳ್ಳು ಕೇಸ್ ಹಾಕಲಾಗಿದೆ’ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.

ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಚಿವರ ಒತ್ತಡಕ್ಕೆ ಒಳಗಾಗಿ ಹಲ್ಲೆಗೊಳಗಾದ ಅಮಾಯಕರ ಮೇಲೂ ಪ್ರಕರಣ ದಾಖಲಿಸಿದೆ. ಕೂಡಲೇ ಈ ಸುಳ್ಳು ಕೇಸ್ ವಾಪಸ್ ಪಡೆಯಬೇಕು. ಎಲ್ಲ ಸುಳ್ಳು ಕೇಸ್ ಹಿಂಪಡೆದು ಎಲ್ಲ ತಪ್ಪಿತಸ್ಥರನ್ನು ಬಂಧಿಸಿ ಅವರ ವಿರುದ್ಧ ಧರ್ಮದ್ರೋಹ, ಸಮಾಜದಲ್ಲಿ ಅಶಾಂತಿ, ಕೋಮು ಗಲಭೆ ಸೃಷ್ಟಿಸುವ ಕಾಯ್ದೆಯಡಿ ಕೇಸ್ ದಾಖಲಿಸಬೇಕು. ಇಲ್ಲವಾದಲ್ಲಿ ಜೂನ್‌ 1ರಂದು ಪಕ್ಷದಿಂದ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದು ಗುರುವಾರ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ವಿದ್ಯಾರ್ಥಿಗಳಲ್ಲಿ ಈ ತರಹದ ಮನೋಭಾವ ಬೆಳೆದಿರುವುದು ಆತಂಕಕಾರಿ ವಿಷಯ. ಇದು ಸಮಾಜದ ಶಾಂತಿ, ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ, ಜಿಲ್ಲಾಡಳಿತ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ಮುಸ್ಲಿಂ ಯುವಕರು ಗುಂಪು ಕಟ್ಟಿಕೊಂಡು ಹಲ್ಲೆ, ದಾಳಿಗೆ ಮುಂದಾಗಿರುವುದು ನೋಡಿದರೆ ಇವರಿಗೆ ರಾಜ್ಯ ಸರ್ಕಾರದ ಅಂಜಿಕೆ ಇಲ್ಲ. ಬದಲಾಗಿ ಸರ್ಕಾರದ ಪ್ರೋತ್ಸಾಹ, ಉತ್ತೇಜನ ಸಿಗುತ್ತಿರುವಂತೆ ಕಾಣಿತ್ತಿದೆ. ಬೆಂಗಳೂರಿನಲ್ಲಿ ಹನುಮಾನ ಚಾಲೀಸಾ ಹಾಡು ಹಾಕಿದ್ದಕ್ಕೆ ಹಲ್ಲೆ ಮಾಡಲಾಗಿತ್ತು ಎಂದು ನೆನಪಿಸಿದ್ದಾರೆ.

ಕಿಡಿಗೇಡಿಗಳಿಗೆ, ಸಮಾಜಘಾತುಕರಿಗೆ, ರೌಡಿಗಳಿಗೆ ರಾಜ್ಯ ಸರ್ಕಾರ, ಪೊಲೀಸರು, ಕಾನೂನಿನ ಭಯವೇ ಇಲ್ಲದಂತಾಗಿದೆ. ಇದಕ್ಕೆ ರೌಡಿಶೀಟರ್ ರಸೂಲ್ ಫಕೀರ್ ಎಂಬಾತ ಬೀದರ್ ನ್ಯೂಟೌನ್ ಪೊಲೀಸ್ ಠಾಣೆಯ ಸಿಪಿಐ ಸಂತೋಷ ತಟ್ಟೆಪಳ್ಳಿ ಅವರಿಗೆ ಚಾಕು ಇರಿದು,‌ ಹಲ್ಲೆ ಮಾಡಿದ ಘಟನೆಯೇ ಸಾಕ್ಷಿಯಾಗಿದೆ ಕಿಡಿಕಾರಿದ್ದಾರೆ.

ಜಿಲ್ಲಾಡಳಿತ, ಪೊಲೀಸ್ ಇಲಾಖೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಯಾರದೋ ಒತ್ತಡಕ್ಕೆ ಒಳಗಾಗಿ, ತುಷ್ಠೀಕರಣ ರಾಜಕಾರಣದಲ್ಲಿ ತೊಡಗಿ ವಿನಾಕಾರಣ ಹಲ್ಲೆಗೊಳಗಾದ ಹಿಂದು ವಿದ್ಯಾರ್ಥಿಗಳ ಮೇಲೆ ಹಾಕಿರುವ ಪ್ರಕರಣ ಕೂಡಲೇ ವಾಪಸ್ ಪಡೆಯಬೇಕು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಬೇಕು.‌ ಇಲ್ಲದಿದ್ದರೆ ಪಕ್ಷದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT