ಸೋಮವಾರ, ಆಗಸ್ಟ್ 8, 2022
21 °C

ರಾಹುಲ್ ಗಾಂಧಿ ಜನ್ಮದಿನ: ರಕ್ತದಾನ ಶಿಬಿರ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ 50ನೇ ಜನ್ಮದಿನದ ಪ್ರಯುಕ್ತ ಕಾಂಗ್ರೆಸ್ ಜಿಲ್ಲಾ ಘಟಕವು ನಗರದ ಅಕ್ಕ ಮಹಾದೇವಿ ಕಾಲೇಜಿನಲ್ಲಿ ಶನಿವಾರ (ಜೂ.20) ಬೆಳಿಗ್ಗೆ 11ಕ್ಕೆ ರಕ್ತದಾನ ಶಿಬಿರ, ಹಣ್ಣು ಹಂಪಲು ಹಾಗೂ ಮಾಸ್ಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಉದ್ಘಾಟಿಸುವರು. ಶಾಸಕ ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕ, ಯುವ ಘಟಕ, ವಿದ್ಯಾರ್ಥಿ ಘಟಕ, ಸೇವಾ ದಳ, ಅಲ್ಪಸಂಖ್ಯಾತರ ಘಟಕ, ಹಿಂದುಳಿದ ವರ್ಗಗಳ ಘಟಕ, ಅಸಂಘಟಿತ ಕಾರ್ಮಿಕರ ಘಟಕ, ಐಎನ್‍ಟಿಯುಸಿ ಪದಾಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ.

ಪಕ್ಷದ ಮುಖಂಡರು, ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಬೇಕು. ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ರಾಹುಲ್ ಗಾಂಧಿ ಅವರ ಜನ್ಮದಿನವನ್ನು ಸ್ಮರಣೀಯವಾಗಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು