ಭಾಲ್ಕಿ: ತಾಲ್ಲೂಕಿನ ಕೇಸರ ಜವಳಗಾ ಕ್ರಾಸ್ ಮುಖ್ಯರಸ್ತೆ ಪಕ್ಕದಲ್ಲಿರುವ ಶಿವಸಾಯಿ ಡಾಬಾ ಮೇಲೆ ದಾಳಿ ನಡೆಸಿರುವ ಅಬಕಾರಿ ಸಿಬ್ಬಂದಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8.640 ಲೀ ಮದ್ಯ, 35.400 ಲೀ ಬಿಯರ್ ಜಪ್ತಿ ಮಾಡಿದ್ದಾರೆ. ಆರೋಪಿ ದತ್ತಾತ್ರೇಯ ಚಂದ್ರಕಾಂತ ಹಣಮಶೆಟ್ಟಿ ಪರಾರಿಯಾಗಿದ್ದಾರೆ. ಈತನ ವಿರುದ್ಧ ಭಾಲ್ಕಿ ವಲಯದ ಅಬಕಾರಿ ಉಪ ನಿರೀಕ್ಷಕಿ ಪ್ರೀತಿ ರಾಠೋಡ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯಲ್ಲಿ ಸುನಿಲ್ ಶಿಂಧೆ, ವೈಜಿನಾಥ ಪಾಟೀಲ ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.