ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ಆವರಣದಲ್ಲಿ ಮಳೆ ನೀರು: ಮನೆಗೆ ತೆರಳಿದ ವಿದ್ಯಾರ್ಥಿಗಳು

Published 20 ಜುಲೈ 2023, 12:53 IST
Last Updated 20 ಜುಲೈ 2023, 12:53 IST
ಅಕ್ಷರ ಗಾತ್ರ

ಹುಮನಾಬಾದ್‌: ತಾಲ್ಲೂಕಿನ ಸಿಂಧಬಂದಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಳೆ ನೀರು ಜಲಾವೃತಗೊಂಡಿವೆ.

ಮುನ್ನೆಚ್ಚರಿಕೆಯಾಗಿ ಮಕ್ಕಳನ್ನು ಮಧ್ಯಾಹ್ನ ನಂತರ ಮನೆಗೆ ಕಳುಹಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಗೂಡಾಳ್ ತಿಳಿಸಿದರು.

ಪ್ರತಿ ವರ್ಷ ಅಧಿಕ ಮಳೆ ಬಂದರೆ ಶಾಲೆ ಆವರಣದಲ್ಲಿ ಪೂರ್ತಿ ನೀರು ಸಂಗ್ರಹ ಆಗುತ್ತಿವೆ. ಇದರಿಂದ ವಿದ್ಯಾರ್ಥಿಗಳು ಓಡಾಡಲು ತೊಂದರೆ ಅನುಭವಿಸುವ ಪರಿಸ್ಥಿತಿ ಇದೆ. ತಾಲ್ಲೂಕಿನಲ್ಲಿ ಮೂರ್ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದ ಸಮಸ್ಯೆ ಉಲ್ಬಣಗೊಂಡಿದೆ. ಮಳೆ ಇದೇ ರೀತಿ ಮುಂದುವರೆದರೆ ಶಾಲೆ ಆವರಣದಲ್ಲಿ ಮತ್ತಷ್ಟು ನೀರು ಸಂಗ್ರಹ ಆಗುತ್ತವೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಶಾಲೆ ಆವರಣವನ್ನು ಮಣ್ಣಿನಿಂದ ಭರ್ತಿ ಮಾಡಿಸಿ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥ ರವಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT