ರಸ್ತೆ ಮೇಲೆ ಹರಿದ ಮಳೆ ನೀರು
ಹುಮನಾಬಾದ್: ಸಾಧಾರಣ ಮಳೆ

ಹುಮನಾಬಾದ್: ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಅರ್ಧ ಗಂಟೆ ಗುಡುಗು ಸಹಿತ ಸಾಧಾರಣ ಮಳೆಯಾಯಿತು.
ಗುಡುಗು ಸಹಿತ ಸುರಿದ ಮಳೆಯಿಂದಾಗಿ ಇಲ್ಲಿನ ಪ್ರಮುಖ ರಸ್ತೆಗಳ ಮೇಲೆ ನೀರು ಹರಿಯಿತು. ಇದರಿಂದ ವಾಹನ ಸಂಚಾರಕ್ಕೆ ಮತ್ತು ಪಾದಚಾರಿಗಳಿಗೆ ತೊಂದರೆ ಉಂಟಾಯಿತು.
ಪಟ್ಟಣದ ತಾಲ್ಲೂಕು ಪಂಚಾಯಿತಿ, ಹಳೆ ತಹಶೀಲ್ದಾರ್ ಕಚೇರಿ, ಪುರಸಭೆ, ಬಸ್ ನಿಲ್ದಾಣ ಮುಂಭಾಗದ
ಪ್ರಮುಖ ರಸ್ತೆ ಹಾಗೂ ಇಲ್ಲಿನ ಕೋಳಿವಾಡ, ಟೀಚರ್ಸ್ ಕಾಲೊನಿ, ಇಂದಿರಾನಗರ, ವಾಂಜ್ರಿ, ಆಶ್ರಯ ಕಾಲೊನಿ, ಗಾಂಧಿನಗರ ಸೇರಿದಂತೆ ವಿವಿಧ ಬಡಾವಣೆಯ ಮುಖ್ಯರಸ್ತೆಗಳ ಮೇಲೆ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆ
ಉಂಟಾಯಿತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.