ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಧಾರಾಕಾರ ಮಳೆ

Last Updated 10 ಜುಲೈ 2021, 4:06 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದೆ.

ಔರಾದ್ ತಾಲ್ಲೂಕಿನ ಖಾಶೆಂಪುರ ನಾಗೂರ ನಡುವಿನ ಹಳ್ಳದ ಸೇತುವೆ ಮೇಲಿಂದ ನೀರು ಹರಿಯುತ್ತಿದೆ. ವಡಗಾಂವ- ಕಂದುಗೂಳ ನಡುವಿನ ಸೇತುವೆ ಮುಳುಗಡೆಯಾಗಿ ಕೆಲ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಹಳ್ಳ ಕೊಳ್ಳ ಗಳು ಉಕ್ಕಿ ಹರಿದು ನೀರು ಹೊಲಗಳಿಗೆ ನುಗ್ಗಿದೆ. ಬೋರಗಿ ಗ್ರಾಮದಲ್ಲಿ ಗಟಾರುಗಳು‌ಉಕ್ಕಿ ಹರಿದು ನೀರು ಮನೆಗಳಿಗೆ ನುಗ್ಗಿದೆ.

ಹುಮನಾಬಾದ್‌ನಲ್ಲೂ ಮಳೆಯಾ ಗಿದ್ದು, ಚರಂಡಿ ತುಂಬಿ ನೀರು ರಸ್ತೆಗಳ ಮೇಲೆ ಹರಿಯಿತು. ಹೈದರಾಬಾದ್- ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಮಳೆ ಅಬ್ಬರಿಸಿ ರಸ್ತೆ ಮಳೆ ಅಪಾರ ಪ್ರಮಾಣದಲ್ಲಿ ನೀರು ಹರಿದ ಕಾರಣ ಸವಾರರು ರಸ್ತೆ ಕಾಣದೆ ವಾಹನಗಳು ನಿಧಾನವಾಗಿ ಸಾಗಿದವು.

ಬೀದರ್, ಭಾಲ್ಕಿ, ಖಟಕ ಚಿಂಚೋಳಿ, ಚಿಟಗುಪ್ಪ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT