ಭಾನುವಾರ, ಜನವರಿ 24, 2021
27 °C

ಬೀದರ್‌ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯಲ್ಲಿ ಮೋಡ ಕವಿದ ಹಾಗೂ ತಣ್ಣನೆಯ ವಾತಾವರಣವಿದೆ. ಬೀದರ್‌, ಭಾಲ್ಕಿ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಅಲ್ಲಲ್ಲಿ ಜಿಟಿ ಜಿಟಿ ಮಳೆಯಾಗಿದೆ.

ಹವಾಮಾನ ಇಲಾಖೆ ತಜ್ಞರ ಪ್ರಕಾರ ಮೂರು ದಿನ ಮೋಡ ಕವಿದ ವಾತಾವರಣ ಇರಲಿದೆ. ಜಿಲ್ಲೆಯಲ್ಲಿ ನೆಲ ತೊಯ್ಯುವಷ್ಟು ಮಳೆ ಸುರಿದಿಲ್ಲ. ಆದರೂ ತೊಗರಿ ಕಟಾವು ಮಾಡುವುದನ್ನು ಒಂದೆರೆಡು ದಿನ ಮಂದೂಡುವುದು ಒಳಿತು ಎಂದು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ರೈತರಿಗೆ ಸಲಹೆ ನೀಡಿದ್ದಾರೆ.

ತೊಗರಿ ರಾಶಿ ಮಾಡಿದರೆ ಅದು ಕೊಳೆಯುವ ಸಾಧ್ಯತೆ ಇದೆ. ಇಂತಹ ವಾತಾವರಣ ಕಡಲೆ ಬೆಳೆಯ ಇಳುವರಿಗೂ ಸ್ವಲ್ಪಮಟ್ಟಿಗೆ ಮಾರಕವಾಗಬಹುದು. ಜೋಳಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಕೃಷಿ ವಿಜ್ಞಾನ ಕೇಂದ್ರದ ಡಾ.ಸುನೀಲ ತಿಳಿಸಿದ್ದಾರೆ.

ಕೃಷಿ ಇಲಾಖೆ ರೈತರಿಗೆ ಯಾವುದೇ ರೀತಿಯ ಮುನ್ಸೂಚನೆ ನೀಡಿಲ್ಲ. ಎರಡು ದಿನಗಳಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇದೆ. ಬೆಳಿಗ್ಗೆ ಜಿಟಿಜಿಟಿ ಮಳೆ ಸುರಿದ ಪರಿಣಾಮ ನಗರ ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು