ಮಂಗಳವಾರ, ಜೂನ್ 22, 2021
22 °C

ಬೀದರ್: ಬಿರುಗಾಳಿ ಸಹಿತ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲೆಯ ವಿವಿಧೆಡೆ ಬುಧವಾರ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆ ಸುರಿಯಿತು.

ಬೀದರ್, ಭಾಲ್ಕಿ, ಔರಾದ್, ಬಸವಕಲ್ಯಾಣ ಕಮಲನಗರ, ಹುಲಸೂರು ಮೊದಲಾದ ಕಡೆಗಳಲ್ಲಿ ಮಧ್ಯಾಹ್ನ ಮಳೆ ಸುರಿಯಿತು.

ನಗರದಲ್ಲಿ ಮಧ್ಯಾಹ್ನ 1.10ರ ಸುಮಾರಿಗೆ ಮೋಡ ಕವಿಯಲಾರಂಭಿಸಿತು. ಬಿರುಗಾಳಿ ಜೋರಾಗಿ ಬೀಸಿತು. ನಂತರ ಮಳೆ ಸುರಿಯಿತು. ಬೇಸಿಗೆಯಲ್ಲಿ ಆಗಾಗ ಮಳೆ ಸುರಿಯುತ್ತಿರುವ ಕಾರಣ ಬಿಸಿಲ ಧಗೆ ಕೊಂಚ ಕಡಿಮೆಯಾಗಿದೆ.

ಭಾಲ್ಕಿ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಮಧ್ಯಾಹ್ನ 15 ನಿಮಿಷ ಸುರಿದ ಬಿರುಗಾಳಿ ಸಹಿತ ಮಳೆ ಸುರಿಯಿತು. ಧಾರಜವಾಡಿ, ಕದಲಾಬಾದ್, ತಳವಾಡ, ಕರಡ್ಯಾಳ ಸೇರಿದಂತೆ ವಿವಿಧೆಡೆ ಮಳೆ ಸುರಿದಿದೆ. ಸಂಜೆವರೆಗೂ ಮೋಡ ಕವಿದ ವಾತಾವರಣ ಇತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು