ಬೀದರ್ ಜಿಲ್ಲೆಯ ವಿವಿಧೆಡೆ ಮಳೆ

ಬೀದರ್: ಜಿಲ್ಲೆಯ ವಿವಿಧೆಡೆ ಸೋಮವಾರ ಸಾಧಾರಣ ಮಳೆಯಾಗಿದೆ. ಬೀದರ್ ನಗರ, ಗ್ರಾಮೀಣ, ಹುಮನಾಬಾದ್, ಚಿಟಗುಪ್ಪ ಹಾಗೂ ಹುಲಸೂರು ತಾಲ್ಲೂಕಿನಲ್ಲಿ ಮಳೆ ಸುರಿದಿದೆ.
ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಬಿಸಿಲು ಹಾಗೂ ವಿಪರೀತ ಧಗೆ ಇತ್ತು. ಸಂಜೆ ಇದ್ದಕ್ಕಿದ್ದಂತೆಯೇ ಮೋಡಗಳು ಆವರಿಸಿ ಮಳೆ ಸುರಿಯಿತು.
ನಗರದ ಪ್ರದೇಶದಲ್ಲಿ ರಸ್ತೆ ಮೇಲೆ ನೀರು ಹರಿಯಿತು. ರೋಟರಿ ವೃತ್ತದಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತುಕೊಂಡಿತ್ತು. ಕೆಇಬಿ ರಸ್ತೆಯಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿ ನಡೆದಿರುವ ಕಾರಣ ರಸ್ತೆ ಸಂಪೂರ್ಣ ಕೆಸರುಮಯವಾಗಿತ್ತು.
ಸಿಡಿಲು ಬಡಿದು ಎಮ್ಮೆ ಸಾವು
ಹುಲಸೂರ: ಇಲ್ಲಿನ ಶಿವರಾಜ್ ಮಂಗ ಅವರ ಹೊಲದಲ್ಲಿ ಸೋಮವಾರ ಸಿಡಿಲು ಬಡಿದು ಎಮ್ಮೆ ಸಾವನ್ನಪ್ಪಿದೆ. ಪಶು ಆಸ್ಪತ್ರೆಯ ಸಿಬ್ಬಂದಿ ಶಿವಕುಮಾರ್ ಕೌಟೆ ಪರಿಶೀಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.