ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌ ಜಿಲ್ಲೆಯಲ್ಲಿ ಬಿರುಸಿನ ಮಳೆ

Published : 24 ಸೆಪ್ಟೆಂಬರ್ 2024, 16:07 IST
Last Updated : 24 ಸೆಪ್ಟೆಂಬರ್ 2024, 16:07 IST
ಫಾಲೋ ಮಾಡಿ
Comments

ಬೀದರ್‌: ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಬಿರುಸಿನ ಮಳೆಯಾಗಿದೆ.

ಬೀದರ್‌ ನಗರ, ಬೀದರ್‌ ತಾಲ್ಲೂಕು, ಹುಲಸೂರ, ಭಾಲ್ಕಿ, ಚಿಟಗುಪ್ಪ ಹಾಗೂ ಹುಮನಾಬಾದ್‌ನಲ್ಲಿ ಜೋರು ಮಳೆಯಾದರೆ, ಬಸವಕಲ್ಯಾಣ, ಔರಾದ್‌, ಕಮಲನಗರದಲ್ಲಿ ಮಧ್ಯಮ ಪ್ರಮಾಣದಲ್ಲಿ ಮಳೆಯಾಗಿದೆ.

ಬೀದರ್‌ ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಮಂಗಳವಾರ ನಸುಕಿನ ಜಾವ ಐದರಿಂದ ಆರು ಗಂಟೆಯವರೆಗೆ ಬಿರುಸಿನ ವರ್ಷಧಾರೆಯಾಯಿತು. ಸಂಜೆಯವರೆಗೆ ಬಿಡುವು ಕೊಟ್ಟ ಮಳೆ ಪುನಃ ನಾಲ್ಕು ಗಂಟೆಗೆ ಆರಂಭಗೊಂಡು ಆರು ಗಂಟೆಯ ತನಕ ಗುಡುಗು ಸಹಿತ ಜೋರಾಗಿ ಸುರಿಯಿತು.

ನಗರದ ಮನ್ನಳ್ಳಿ ರಸ್ತೆ, ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತ, ತಹಶೀಲ್ದಾರ್‌ ಕಚೇರಿ ಸೇರಿ ಹಲವೆಡೆ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡಿದ್ದರಿಂದ ವಾಹನಗಳು ನಿಧಾನವಾಗಿ ಸಂಚರಿಸಿದವು.

ಶಾಲಾ, ಕಾಲೇಜು ಹಾಗೂ ದೈನಂದಿನ ಕೆಲಸ ಮುಗಿಸಿಕೊಂಡು ಮನೆ ಸೇರುವ ಹೊತ್ತಿನಲ್ಲಿ ಬಿರುಸಿನ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಕೂಡ ನಡೆಸಲು ಸಾಧ್ಯವಾಗಲಿಲ್ಲ. ಮುಖಂಡರು ಮನವಿ ಪತ್ರ ಕೊಟ್ಟು ನಿರ್ಗಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT