ಸೋಮವಾರ, ಆಗಸ್ಟ್ 15, 2022
22 °C

ಇ- ಸಂಜೀವಿನಿ ಆ್ಯಪ್ ಜಾಗೃತಿ ಮೂಡಿಸಿ: ಗ್ಯಾನೇಂದ್ರಕುಮಾರ ಗಂಗ್ವಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಇ ಸಂಜೀವಿನಿ ಒಪಿಡಿ ಆ್ಯಪ್ ಬಳಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಹೇಳಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಈಚೆಗೆ ನಡೆದ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಸಾಮಾನ್ಯ ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದರೆ, ಆಸ್ಪತ್ರೆಗೆ ತೆರಳಲು ಸಾಧ್ಯವಾಗದಿದ್ದರೆ ಮೊಬೈಲ್‍ನಲ್ಲಿಯೇ ವೈದ್ಯರು ಔಷಧಗಳನ್ನು ಹೇಳುತ್ತಾರೆ ಎಂದು ತಿಳಿಸಿದರು.

ವೈದ್ಯರನ್ನು ಮೊಬೈಲ್‍ನಲ್ಲಿ ಸಂಪರ್ಕಿಸಲು ಮೊಬೈಲ್‍ನಲ್ಲಿನ ಗೂಗಲ್ ಸರ್ಚ್‍ನಲ್ಲಿ ಇ- ಸಂಜೀವಿನಿ ಒಪಿಡಿ ಎಂದು ನಮೂದಿಸಿ, ರಿಜಿಸ್ಟರ್ ಆಗಬೇಕು. ವೆಬ್ ವಿಡಿಯೋ ಮೂಲಕ ಸಂಪರ್ಕಕ್ಕೆ ಬರುವ ವೈದ್ಯರು, ಕಾಯಿಲೆ ಕುರಿತು ವಿಚಾರಿಸಿ ಚಿಕಿತ್ಸೆ ನೀಡಲು ಸಹಕರಿಸುವರು. ಆಸ್ಪತ್ರೆಯ ಕದ ತಟ್ಟದೇ, ಇರುವಲ್ಲಿಂದಲೇ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.