ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಎನ್. ಫೌಂಡೇಷನ್‍ಗೆ ರಾಜ್ಯೋತ್ಸವ ಪ್ರಶಸ್ತಿ

Last Updated 1 ನವೆಂಬರ್ 2022, 13:46 IST
ಅಕ್ಷರ ಗಾತ್ರ

ಬೀದರ್: ಸಾಮಾಜಿಕ, ಜನೋಪಯೋಗಿ ಕಾರ್ಯ ಚಟುವಟಿಕೆಗಳ ಮೂಲಕ ಗಮನ ಸೆಳೆದಿರುವ ಇಲ್ಲಿಯ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್‍ಗೆ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಒಂದೇ ರೂಪಾಯಿಯಲ್ಲಿ ಕೋವಿಡ್ ಚಿಕಿತ್ಸೆ, ಸೋಂಕಿತರ ಗೌರವಯುತ ಅಂತ್ಯ ಸಂಸ್ಕಾರ, ಬಡವರಿಗೆ ಆಹಾರಧಾನ್ಯ ಕಿಟ್ ವಿತರಣೆ, ಉದ್ಯೋಗ ಮೇಳ, ಶಾಲಾ ಮಕ್ಕಳಿಗೆ ನೋಟ್‍ಪುಸ್ತಕ ವಿತರಣೆ, ಪ್ರತಿಭಾವಂತರಿಗೆ ಆರ್ಥಿಕ ನೆರವು ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಸೇರಿ ಹಲವು ಯೋಜನೆಗಳ ಸೌಲಭ್ಯ ಅರ್ಹರಿಗೆ ತಲುಪಿಸಿರುವುದು ಸೇರಿದಂತೆ ಫೌಂಡೇಷನ್ ಕಾರ್ಯ ಚಟುವಟಿಕೆಗಳನ್ನು ಪರಿಗಣಿಸಿ, ಜಿಲ್ಲಾ ಆಡಳಿತ ಪ್ರಶಸ್ತಿ ನೀಡಿದೆ.

ಸಹಕಾರ ಕ್ಷೇತ್ರದ ಮೂಲಕ ಸರ್ವರ ಕಲ್ಯಾಣದ ಕನಸು ಕಂಡವರು ಮತ್ತು ಅದನ್ನು ನನಸಾಗಿಸಿದವರು ದಿ. ಡಾ.ಗುರುಪಾದಪ್ಪ ನಾಗಮಾರಪಳ್ಳಿ. ಅವರ ಕನಸುಗಳನ್ನು ಸಾಕಾರಗೊಳಿಸುವುದಕ್ಕಾಗಿ, ಜನ ಸೇವೆಯನ್ನು ಮುಂದುವರಿಸುವುದಕ್ಕಾಗಿ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ಆರಂಭಿಸಲಾಗಿದೆ. ಅತ್ಯಲ್ಪ ಕಾಲದಲ್ಲಿ ಫೌಂಡೇಷನ್ ತನ್ನ ಜನೋಪಯೋಗಿ ಕಾರ್ಯಗಳ ಮೂಲಕ ಎಲ್ಲರ ಮನಸ್ಸು ಗೆದ್ದಿರುವುದು ಸಂತಸ ಉಂಟು ಮಾಡಿದೆ ಎಂದು ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದರು.
ಪ್ರಶಸ್ತಿಯು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜನಹಿತ, ಸಾಮಾಜಿಕ ಚಟುವಟಿಕೆ ನಡೆಸಲು ಪ್ರೇರಣೆ ನೀಡಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT