ಬೀದರ್: 2012ರ ಐಎಎಸ್ ತಂಡದ ಅಧಿಕಾರಿ ಕೇರಳ ಮೂಲದ ರಾಮಚಂದ್ರನ್ ಆರ್. ನೂತನ ಜಿಲ್ಲಾಧಿಕಾರಿಯಾಗಿ ಗುರುವಾರ ಇಲ್ಲಿ ಅಧಿಕಾರ ವಹಿಸಿಕೊಂಡರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ ಶ್ರೀಧರ್, ನಗರ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟಪ್ಪಗೋಳ, ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ನೂತನ ಜಿಲ್ಲಾಧಿಕಾರಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.

ರಾಮಚಂದ್ರನ್ ಅವರು ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರಾಗಿ, ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ, ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೊಗ ಖಾತರಿ ಯೋಜನೆ ಹಾಗೂ ಕೊಪ್ಪಳದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಅತ್ಯುತ್ತಮ ಕೆಲಸ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.