ರಂಜಾನ್: ಮನೆಯಲ್ಲೇ ಪ್ರಾರ್ಥನೆ ಮಾಡಿ

ಬೀದರ್: ಕೋವಿಡ್ 19 ಹರಡುವಿಕೆ ಭೀತಿ ಇರುವ ಕಾರಣ ಕರ್ನಾಟಕ ವಕ್ಫ್ ಮಂಡಳಿಯ ಸೂಚನೆಯಂತೆ ಮುಸ್ಲಿಂ ಸಮುದಾಯದ ಎಲ್ಲರೂ ತಮ್ಮ ತಮ್ಮ ಮನೆಗಳಲ್ಲೇ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಬೇಕು ಎಂದು ಇಲ್ಲಿಯ ಮೌಲಾನಾ ಸಯ್ಯದ್ ಅಬ್ದುಲ್ ವಹೀದ್ ಖಾಸ್ಮಿ ಮನವಿ ಮಾಡಿದ್ದಾರೆ.
ಕೊರೊನಾದಿಂದಾಗಿ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇಲ್ಲ. ಕರ್ನಾಟಕ ವಕ್ಫ್ ಬೋರ್ಡ್ ಸೂಚನೆಯಂತೆ ಕೇವಲ ಮೂವರು ಮಾತ್ರ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಉಳಿದವರು ತಮ್ಮ ತಮ್ಮ ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸಿ ದೇವರನ್ನು ಸ್ಮರಿಸಬೇಕು ಎಂದು ಹೇಳಿದ್ದಾರೆ.
ಸಂಜೆ ಇಫ್ತಾರ್ ಹಾಗೂ ಮಸೀದಿಗಳಲ್ಲಿ ಸಾಮೂಹಿಕ ಊಟದ ವ್ಯವಸ್ಥೆಯೂ ಇರುವುದಿಲ್ಲ. ಕರ್ನಾಟಕ ವಕ್ಫ್ ಬೋರ್ಡ್ ಸೂಚಿಸಿದ 14 ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಮಾನವೀಯತೆ ನೆಲೆಯಲ್ಲಿ ನಡೆದುಕೊಳ್ಳುವ ಜತೆಗೆ ಬಡವರಿಗೆ ದಾನ ಕೊಡುವುದನ್ನು ಮುಂದುವರಿಸಬೇಕು. ಬಡವರ ಸಂಕಷ್ಟ ತೊಲಗಿಸಲು ಪ್ರಯತ್ನಿಸಬೇಕು ಎಂದು ಮನವಿ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.