ಬಸವಕಲ್ಯಾಣ (ಬೀದರ್ ಜಿಲ್ಲೆ): ದಸರಾ ದರ್ಬಾರನಲ್ಲಿ ತೆರೆದ ವಾಹನದಲ್ಲಿ ಅಡ್ಡಪಲ್ಲಕ್ಕಿ ಇಟ್ಟು ಮೆರವಣಿಗೆ ನಡೆಸುವುದಕ್ಕೆ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರು ಒಪ್ಪಿಗೆ ಸೂಚಿಸಿದ್ದಾರೆ.

ಈ ಸಂಬಂಧ ಅವರು ಶನಿವಾರ ಪ್ರಕಟಣೆ ಹೊರಡಿಸಿದ್ದಾರೆ. ಕಾರ್ಯಕ್ರಮದ ಗೌರವ ಅಧ್ಯಕ್ಷರೂ ಆಗಿರುವ ಹಾರಕೂಡ ಚನ್ನವೀರ ಶಿವಾಚಾರ್ಯರು ಭಕ್ತರ ಹೆಗಲ ಮೇಲೆ ಪಲ್ಲಕ್ಕಿ ಹೋರುವ ವಿಚಾರವನ್ನು ಒಪ್ಪದೆ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ನಿರ್ಧಾರ ಪ್ರಕಟಿಸಿದ್ದರು.

ಈ ಕಾರಣ ರಂಭಾಪುರಿ ಶಿವಾಚಾರ್ಯರು ಈ ಸ್ಪಷ್ಟೀಕರಣ ನೀಡಿದ್ದಾರೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಬಸವಕಲ್ಯಾಣದಲ್ಲಿ ದಸರಾ ದರ್ಬಾರ್ ನಡೆಯಲಿದ್ದು ನಿಗದಿತ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಲಿವೆ ಎಂದು ಪ್ರಕಟಣೆಯಲ್ಲಿ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.