ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ರಂಭಾಪುರಿ ಶ್ರೀಗಳಿಂದ ಇಷ್ಟಲಿಂಗ ಮಹಾಪೂಜೆ

Published 21 ಜುಲೈ 2023, 15:55 IST
Last Updated 21 ಜುಲೈ 2023, 15:55 IST
ಅಕ್ಷರ ಗಾತ್ರ

ಬೀದರ್‌: ‘ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಜು. 25ರಿಂದ 27ರ ವರೆಗೆ ನಗರ ಹೊರವಲಯದ ಬೀದರ್-ಭಾಲ್ಕಿ ರಸ್ತೆಯಲ್ಲಿರುವ ಜಗದ್ಗುರು ಪಂಚಾಚಾರ್ಯ ಪುಣ್ಯಾಶ್ರಮದಲ್ಲಿ ಇಷ್ಟಲಿಂಗ ಮಹಾ ಪೂಜೆ, ಸಾಮೂಹಿಕ ಅಯ್ಯಾಚಾರ ಹಾಗೂ ಲಿಂಗದೀಕ್ಷಾ ಕಾರ್ಯಕ್ರಮಗಳು ಜರುಗಲಿವೆ’ ಎಂದು ತಮಲೂರಿನ ಶಿವಾನಂದ ಸ್ವಾಮೀಜಿ ತಿಳಿಸಿದರು.

ಪಂಚಾಚಾರ್ಯ ಪುಣ್ಯಾಶ್ರಮದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಣುಕಾಚಾರ್ಯ ಮಂದಿರ ಹಾಗೂ ಜಗದ್ಗುರು ಪಂಚಾಚಾರ್ಯ ಏಜ್ಯುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿರುವ ಪುಣ್ಯಾಶ್ರಮದಲ್ಲಿ ಬೆಳಿಗ್ಗೆ ಸಾಮೂಹಿಕ ಮಹಾಪೂಜೆ, ನಂದಿಸ್ಥಾಪನೆ, ವೀರಭದ್ರ ಹಾಗೂ ಭದ್ರಕಾಳಿ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಲಿದೆ ಎಂದು ವಿವರಿಸಿದರು.

ಅಖಿಲ ಭಾರತೀಯ ವೀರಶೈವ ಮಹಾಸಭೆ ಜಿಲ್ಲಾ ಅಧ್ಯಕ್ಷ ವೈಜಿನಾಥ ಕಮಠಾಣೆ ಮಾತನಾಡಿ, ಪಂಚಾಚಾರ್ಯ ಪುಣ್ಯಾಶ್ರಮದಲ್ಲಿ ಜಿಲ್ಲೆಯ ಮೊದಲ ರೇಣುಕಾಚಾರ್ಯರ ಮಂದಿರ ನಿರ್ಮಾಣಗೊಂಡಿರುವುದು ಖುಷಿಯ ವಿಚಾರ. ಜಾಗತಿಕ ಧರ್ಮಗಳಲ್ಲಿ ವೀರಶೈವ ಲಿಂಗಾಯತ ಧರ್ಮ ಶ್ರೇಷ್ಠವಾದುದು. ವಿಶ್ವಶಾಂತಿ, ಲೋಕಕಲ್ಯಾಣಕ್ಕಾಗಿ ಈ ಧರ್ಮ ಸ್ಥಾಪನೆಗೊಂಡಿದೆ. ಹಂತ ಹಂತವಾಗಿ ಪುಣ್ಯಾಶ್ರಮವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.

ಜಗದ್ಗುರು ಪಂಚಾಚಾರ್ಯ ಏಜ್ಯುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವೇದಮೂರ್ತಿ ಷಣ್ಮುಖಯ್ಯ ಸ್ವಾಮಿ, ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಶ್ರೀಕಾಂತ ಸ್ವಾಮಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT