ಮಂಗಳವಾರ, ಜನವರಿ 18, 2022
27 °C

ರಂಗೋಲಿ ಜನಪದ ಸಂಸ್ಕೃತಿ ಪ್ರತೀಕ- ಬೀದರ್ ಗ್ರಾಮೀಣ ಪಿಎಸ್‍ಐ ಸುವರ್ಣಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ರಂಗೋಲಿ ಜನಪದ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಬೀದರ್ ಗ್ರಾಮೀಣ ಪಿಎಸ್‍ಐ ಸುವರ್ಣಾ ನುಡಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ನಡೆದ ಜಿಲ್ಲಾಮಟ್ಟದ ರಂಗೋಲಿ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೆ ಮಹಿಳೆಯರು ಮನೆ ಅಂಗಳದ ಕಳೆ ಹೆಚ್ಚಿಸಲು ರಂಗೋಲಿ ಬಿಡಿಸುತ್ತಿದ್ದರು. ಆಧುನಿಕತೆ ಭರಾಟೆಯಲ್ಲಿ ರಂಗೋಲಿಯಿಂದ ದೂರ ಸರಿಯುತ್ತಿರುವುದು ಕಳವಳಕಾರಿಯಾಗಿದೆ ಎಂದರು.

ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತಿನ ಕಾರ್ಯದರ್ಶಿ ರಾಜಕುಮಾರ ಹೆಬ್ಬಾಳೆ ಮಾತನಾಡಿ, ಜಾನಪದ ಸಂಸ್ಕøತಿಯನ್ನು ಉಳಿಸಿ ಬೆಳೆಸುವುದು ನಮ್ಮ ಧ್ಯೇಯವಾಗಿದೆ. ಜಿಲ್ಲೆಯ ಅನೇಕ ಕಲಾವಿದರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಮಾಸಾಶನ ಮಂಜೂರು ಮಾಡಿಸಲಾಗಿದೆ ಎಂದು ತಿಳಿಸಿದರು.

ಸುನೀತಾ ಕೂಡ್ಲಿಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಸಾಹಿತಿ ಭಾರತಿ ವಸ್ತ್ರದ್ ಅಧ್ಯಕ್ಷತೆ ವಹಿಸಿದ್ದರು. ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ನೀಲಗಂಗಾ ಹೆಬ್ಬಾಳೆ, ಚಿಂತಕಿ ಸವಿತಾ ಹೆಗ್ಗೆ ಉಪಸ್ಥಿತರಿದ್ದರು.

ಮಲ್ಲಮ್ಮ ಸಂತಾಜಿ ಸ್ವಾಗತಿಸಿದರು. ಮಹಾನಂದ ಮಡಕಿ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು