ನಿರ್ಭಿಡೆಯಿಂದ ಕೆಲಸ ಮಾಡಿದರೆ ಸಾಧನೆ ಸುಲಭ

7
ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಈಶ್ವರ ಖಂಡ್ರೆ ಅಭಿಮತ

ನಿರ್ಭಿಡೆಯಿಂದ ಕೆಲಸ ಮಾಡಿದರೆ ಸಾಧನೆ ಸುಲಭ

Published:
Updated:
Deccan Herald

ಬೀದರ್‌: ‘ಅಧಿಕಾರಿಗಳು ನಿರ್ಭಿಡೆಯಿಂದ ಕೆಲಸ ಮಾಡಿದರೆ ಮಾತ್ರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ. ಸಾಧನೆಯೂ ಸುಲಭವಾಗುತ್ತದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ರಂಗ ಮಂದಿರದಲ್ಲಿ ಶುಕ್ರವಾರ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಸಾಧನೆ ಬಿಂಬಿಸುವ ‘ಸಾಧನೆ ಹಾದಿಯಲ್ಲಿ...’ ಪುಸ್ತಕ ಬಿಡುಗಡೆ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗಕ್ಕೆ ಮಹತ್ವದ ಸ್ಥಾನ ಇದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಅಥವಾ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಅಧಿಕಾರಿಗಳ ಮೇಲೆ ಇರುತ್ತದೆ. ಅಧಿಕಾರಿಗಳ ನಿಷ್ಠೆ ಕಾರ್ಯಾಂಗದ ಘನತೆಯನ್ನು ಹೆಚ್ಚಿಸುತ್ತದೆ’ ಎಂದು ಹೇಳಿದರು.

‘ನಮ್ಮನ್ನು ಉದ್ಧಾರ ಮಾಡಲು ಯಾರಾದರೂ ಬರುತ್ತಾರೆ ಎಂದು ಕಾದು ಕುಳಿತುಕೊಳ್ಳುವುದು ಮೂರ್ಖತನ. ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸಾಧನೆ ಮಾಡಲು ಪ್ರಯತ್ನಿಸಬೇಕು’ ಎಂದು ಸಲಹೆ ನೀಡಿದರು.

‘ಸಾಧಕರನ್ನು ಸನ್ಮಾನಿಸುವ ಸಂಪ್ರದಾಯ ಬೀದರ್‌ ಜಿಲ್ಲೆಯಲ್ಲಿ ಇದೆ. ಸಾರ್ವಜನಿಕ ಕ್ಷೇತ್ರದಲ್ಲಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಕೆ.ರತ್ನಪ್ರಭಾ ಅವರಿಗೆ ಸನ್ಮಾನ ಮಾಡುತ್ತಿರುವುದು ಸ್ತುತ್ಯಾರ್ಹವಾಗಿದೆ’ ಎಂದು ಬಣ್ಣಿಸಿದರು.

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಮಾತನಾಡಿ, ‘ಹಿಂದೆ ಬೀದರ್‌ ಜಿಲ್ಲೆಯಲ್ಲಿ ಮಾಡಿದ ಸೇವೆ ತೃಪ್ತಿ ತಂದಿದೆ’ ಎಂದರು.

ಸಂಸದ ಭಗವಂತ ಖೂಬಾ ಹಾಗೂ ಪತ್ರಕರ್ತ ಜಿ.ಎನ್. ರಾಜಶೇಖರ್ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಶಾಸಕರಾದ ರಹೀಂ ಖಾನ್, ಪ್ರಭು ಚವಾಣ್, ಬಿ.ನಾರಾಯಣರಾವ್, ವಿಧಾನ ಪರಿಷತ್‌ ಸದಸ್ಯ ಅರವಿಂದ ಅರಳಿ, ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ, ಜಿಲ್ಲಾಧಿಕಾರಿ ಎಚ್‌.ಆರ್‌.ಮಹಾದೇವ, ಜಿಲ್ಲಾ ಪಂಚಾಯಿತಿ ಸಿಇಒ ಆರ್‌.ಸೆಲ್ವಮಣಿ, ನಿವೃತ್ತ ಅಧಿಕಾರಿ ಎ. ವಿದ್ಯಾಸಾಗರ, ಮಾಜಿ ಶಾಸಕ ಲೈಕೋದ್ದಿನ್, ಶಿವಶರಣಪ್ಪ ವಾಲಿ, ಲುಂಬಿಣಿ ಗೌತಮ, ಶಕುಂತಲಾ ಬೆಲ್ದಾಳೆ, ಲೀಲಾವತಿ ಚಕೋತೆ ಇದ್ದರು.

ಬೀದರ್‌ ಜಿಲ್ಲಾ ನಾಗರಿಕ ಸನ್ಮಾನ ಸಮಿತಿಯ ಶಿವಯ್ಯ ಸ್ವಾಮಿ ಸ್ವಾಗತಿಸಿದರು. ದಿವ್ಯಾ ಮಠದ ಕಾರ್ಯಕ್ರಮ ನಿರೂಪಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !