ಮಂಗಳವಾರ, ಡಿಸೆಂಬರ್ 1, 2020
19 °C

ಅತ್ಯಾಚಾರ: ಆರೋಪಿಗೆ 7 ವರ್ಷ ಜೈಲು, ₹ 1 ಲಕ್ಷ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಮಹಿಳೆ ಮೇಲೆ ಅತ್ಯಾಚಾರ ಹಾಗೂ ಮೋಸ ಮಾಡಿದ ಆರೋಪಿಗೆ ಇಲ್ಲಿಯ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಲಯ 7 ವರ್ಷ ಕಠಿಣ ಶಿಕ್ಷೆ ಹಾಗೂ ₹ 1 ಲಕ್ಷ ದಂಡ ವಿಧಿಸಿದೆ.

2014ರಲ್ಲಿ ಮನೆಯಲ್ಲಿ ಒಬ್ಬಳೇ ಇದ್ದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಹಾಗೂ ಮದುವೆ ಮಾಡಿಕೊಳ್ಳುವುದಾಗಿ ಒಪ್ಪಿ ನಂತರ ನಿರಾಕರಿಸಿದ ಭಾಲ್ಕಿ ತಾಲ್ಲೂಕಿನ ಕಣಜಿ ಗ್ರಾಮದ ಅಪರಾಧಿ ನಾಗೇಶ ಅರ್ಜುನ ಕಮಲಾಪುರೆಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹ 75 ಸಾವಿರ ದಂಡ ವಿಧಿಸಿ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶೆ ಎಚ್‌.ಆರ್.ರಾಧಾ ತೀರ್ಪು ನೀಡಿದ್ದಾರೆ.

ದಂಡ ಪಾವತಿಸಲು ನಿರಾಕರಿಸಿದರೆ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶ ನೀಡಿದ್ದಾರೆ. ಮಹಿಳೆಗೆ ಮೋಸ ಮಾಡಿದ್ದಕ್ಕೆ ಮೂರು ವರ್ಷ ಕಠಿಣ ಶಿಕ್ಷೆ ಹಾಗೂ ₹ 25 ಸಾವಿರ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ನಿರಾಕರಿಸಿದರೆ ಒಂದು ವರ್ಷ ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

ದಂಡದ ರೂಪದಲ್ಲಿ ವಸೂಲಾಗುವ ಮೊತ್ತದಲ್ಲಿನ ₹ 75 ಸಾವಿರ ನೊಂದವಳಿಗೆ ನೀಡುವಂತೆ ಆದೇಶ ನೀಡಿದ್ದಾರೆ. ಧನ್ನೂರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭಾಲ್ಕಿ ಸಿಪಿಐ ಎನ್‌.ಬಿ.ಮಠಪತಿ ದೋಷಾರೋ‍‍ಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕ ಶರಣಗೌಡ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು