ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್ | ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

Published 22 ಜೂನ್ 2024, 15:28 IST
Last Updated 22 ಜೂನ್ 2024, 15:28 IST
ಅಕ್ಷರ ಗಾತ್ರ

ಹುಲಸೂರ (ಬೀದರ್): ಭಾಲ್ಕಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭೀಮಾ ನರಸಿಂಗ ಸೂರ್ಯವಂಶಿ (60) ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಮೆಹಕರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಆರೋಪಿ ಬಾಲಕಿಯ ಮನೆಯವರಿಗೆ ಪರಿಚಿತನಾಗಿದ್ದ. ಬಾಲಕಿ 8ನೇ ತರಗತಿವರೆಗೆ ಓದಿದ್ದು, ಎರಡು ವರ್ಷಗಳ ಹಿಂದೆ ಶಾಲೆ ಬಿಟ್ಟಿದ್ದಳು. ಆಗಾಗ ಆಕೆಯ ಮನೆಗೆ ಬರುತ್ತಿದ್ದ. ಮನೆಗೆ ಬಂದಾಗ ಆತ ಅತ್ಯಾಚಾರ ಮಾಡಿದ್ದಾನೆ. ಬಾಲಕಿ ಗರ್ಭಿಣಿಯಾದ ನಂತರ ಲೈಂಗಿಕ ಕಿರುಕುಳ ನೀಡಿದ ವಿಷಯ ಮನೆಯವರಿಗೆ ಗೊತ್ತಾಗಿದೆ. ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪಿಎಸ್ಐ ಮಾಣಿಕಪ್ಪ ಹಲಮಡಗಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT